ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 3 JANUARY 2024
ಬೆಂಗಳೂರು : ನಿವೃತ್ತ ಕೆಎಎಸ್ ಅಧಿಕಾರಿ, ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ ಹೆಚ್.ಟಿ. ಬಳಿಗಾರ್ (62) ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗೆ (Hospital) ದಾಖಲಾಗಿದ್ದ ಬಳಿಗಾರ್ ಅವರು ಅಲ್ಲಿಯೇ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿದ್ದರು. ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದ ಸಂದರ್ಭ ಅಲ್ಲಿಯೇ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಇದ್ದಾರೆ.
ವಾಲ್ಮೀಕಿ ಸಮುದಾಯದ ಮುಖಂಡರಾಗಿದ್ದ ಬಳಿಗಾರ್, ತಾಲ್ಲೂಕಿನ ಮತ್ತಿಕೋಟೆ ಗ್ರಾಮದವರಾಗಿದ್ದಾರೆ. ಕೆಎಎಸ್ ಅಧಿಕಾರಿಯಾಗಿದ್ದ ಅವರು ಹುದ್ದೆಗೆ ರಾಜೀನಾಮೆ ನೀಡಿ ತಾಲ್ಲೂಕಿಗೆ ಬಂದು ರಾಜಕೀಯ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಆಪ್ತರಾಗಿದ್ದ ಬಳಿಗಾರ್ ಕಾಂಗ್ರೆಸ್, ಜೆಡಿಎಸ್ನಲ್ಲಿ ಸಕ್ರಿಯವಾಗಿದ್ದರು. ಶಿಕಾರಿಪುರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎರಡು ಬಾರಿ ಜೆಡಿಎಸ್ನಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಅಚ್ಚರಿಯ ಬೆಳವಣಿಗೆಯಲ್ಲಿ 2022ರ ನವೆಂಬರ್ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. ಶಿಕಾರಿಪುರ ಏತ ನೀರಾವರಿ ಯೋಜನೆ ಜಾರಿ ಸೇರಿದಂತೆ, ತಾಲೂಕಿನ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ್ದರು. ತಾಲೂಕಿನಲ್ಲಿ ಪ್ರಭಾವ ಬೆಳೆಸಿಕೊಂಡಿದ್ದರು.ಬಳಿಗಾರ್ ಬಗ್ಗೆ ಗೊತ್ತಿರಬೇಕಾದ ಪ್ರಮುಖಾಂಶ
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನನ್ಯ ಸೇವೆ ಸಲ್ಲಿಸಿ, ಶಿಕಾರಿಪುರ ಕ್ಷೇತ್ರದಲ್ಲಿ 2 ಬಾರಿ ಸ್ಪರ್ಧಿಸಿದ್ದ ಸಾಮಾಜಿಕ ಕಳಕಳಿಯುಳ್ಳ ಸರಳ ವ್ಯಕ್ತಿತ್ವದ ಬಳಿಗಾರ್ ಅವರು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ವಾಲ್ಮೀಕಿ ಸಮುದಾಯವನ್ನು ಸಂಘಟಿಸುವಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು, ಶಿಕಾರಿಪುರದಲ್ಲಿ ಪಕ್ಷ ಸಂಘಟನೆಗೆ ತಮ್ಮದೇ ಆದ ಮಹತ್ವದ ಕೊಡುಗೆ ನೀಡಿದ್ದಾರೆ. – ಬಿ.ವೈ.ವಿಜಯೇಂದ್ರ, ಶಿಕಾರಿಪುರ ಶಾಸಕ
ಇದನ್ನೂ ಓದಿ » ಡಾ. ಧನಂಜಯ ಸರ್ಜಿ ಹೆಸರು ಬಳಸಿ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422