SHIVAMOGGA LIVE NEWS | 7 APRIL 2023
SHIKARIPURA : ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವವು (Rathotsava) ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬೆಳಗಿನ ಜಾವದಿಂದಲೆ ಭಕ್ತ ಸಾಗರ
ಗುರುವಾರ ಬೆಳಗಿನ ಜಾವದಿಂದಲೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು. ವೃಷಭ ಲಗ್ನದಲ್ಲಿ ಶ್ರೀ ಸ್ವಾಮಿಯ ರಥಾರೋಹಣ (Rathotsava) ನಡೆಸಲಾಯಿತು. ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ತೇರು ಬೀದಿಯ ಮಾರಿಗದ್ದುಗೆವರೆಗೆ ಬ್ರಹರಥೋತ್ಸವ ನಡೆಯಿತು. ಈ ವೇಳೆ ವೇದ ಘೋಷ, ವಾದ್ಯ ನುಡಿಸಲಾಯಿತು.
ರಾಜ್ಯದ ವಿವಿಧೆಡೆಯಿಂದ ಭಕ್ತರು
ಶ್ರೀ ಹುಚ್ಚರಾಯ ಸ್ವಾಮಿಯ ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ರಥೋತ್ಸವದ ವೇಳೆ ಪೂಜೆ ಸಲ್ಲಿಸಿ, ಸ್ವಾಮಿಗೆ ಹರಕೆ ಹೊತ್ತುಕೊಂಡರು. ರಥ ಬೀದಿಯಲ್ಲಿ ತುಂಬೆಲ್ಲ ಜನರು ನಿಂತು ರಥೋತ್ಸವವನ್ನು ಕಣ್ತುಂಬಿಕೊಂಡರು.

ಯಡಿಯೂರಪ್ಪ ಕುಟುಂಬ ಭಾಗಿ
ರಥೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದವರು ಭಾಗವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರು ರಥೋತ್ಸವದಲ್ಲಿ ಕುಟುಂಬ ಸಹಿತ ಪಾಲ್ಗೊಂಡಿದ್ದರು. ಬಿಜೆಪಿ, ಕಾಂಗ್ರೆಸ್ ಸೇರಿದಂದ ವಿವಿಧ ರಾಜಕೀಯ ಮುಖಂಡರು ಕುಟುಂಬ ಸಹಿತ ರಥೋತ್ಸವದಲ್ಲಿ ಭಾಗಿಯಾಗಿ, ದೇವರ ಪೂಜೆ ಸಲ್ಲಿಸಿದರು.

ಸ್ವಯಂ ಸೇವೆ, ಬಿಗಿ ಭದ್ರತೆ
ರಥೋತ್ಸವದ ಹಿನ್ನೆಲೆ ನೂರಾರು ಯುವಕರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೂರದ ಊರುಗಳಿಂದ ಬಂದಿದ್ದ ಭಕ್ತರಿಗೆ ಜನರು ನೀರು, ತಿಂಡಿ, ತಿನಿಸು ವಿತರಿಸಿದರು. ಇನ್ನು, ರಥೋತ್ಸವ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಇವತ್ತು ರಾತ್ರಿ ಶಿಕಾರಿಪುರದಲ್ಲಿ ತೆಪ್ಪೋತ್ಸವ ನಡೆಯಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



