ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 13 ಅಕ್ಟೋಬರ್ 2020
ಕಸಬಾ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಕ್ಟೋಬರ್ 19ರಂದು ಚಾಲನೆ ನೀಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿಕಾರಿಪುರದಲ್ಲಿ ಕೃಷಿ ಇಲಾಖೆ ಮತ್ತು ಕೃಷಿ ಪ್ರಮಾಣ ಸಂಸ್ಥೆ ಆಯೋಜಿಸಿದ್ದ ಸಾವಯವ ಕೃಷಿ ಮತ್ತು ಪ್ರಮಾಣೀಕರಣ ತರಬೇತಿ ಕಿಸಾನ್ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಯೋಜನೆಯಿಂದ ಏಳು ಸಾವಿರ ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದರು.
ಯಡಿಯೂರಪ್ಪ ಅವರು ಉಪ ಮುಖ್ಯಮಂತ್ರಿ ಆಗಿದ್ದ ವೇಳೆ ಸಾವಯವ ಕೃಷಿಗೆ 200 ಕೋಟಿ ರೂ. ಅನುದಾನ ನೀಡಿದ್ದರು. ಈಗ ಮುಖ್ಯಮಂತ್ರಿ ಆದ ಬಳಿಕವು ಸಾವಯವ ಕೃಷಿಗೆ ಅದ್ಯತೆ ನೀಡುತ್ತಿದ್ದಾರೆ ಎಂದರು.
ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಉಡುಗಣಿ ಪ್ರಕಾಶ್, ಮೆಸ್ಕಾಂ ನಿರ್ದೇಶಕ ರಾಮಾ ನಾಯಕ್, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಮಿಲಿಟರಿ ಬಸವರಾಜು, ಭದ್ರಾ ಕಾಡಾ ಸದಸ್ಯ ರುದ್ರಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಮತಾ ಸಾಲಿ, ರೇಣುಕಾ ಹನುಮಂತಪ್ಪ, ಸಹಾಯಕ ಕೃಷಿ ನಿರ್ದೇಶಕ ಕಿರಣ್ ಕುಮಾರ್ ಸೇರಿ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]