ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021
ಶಿವಮೊಗ್ಗ ಜಿಲ್ಲೆ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಕರೋನ ಪ್ರಕರಣಗಳು ಹೆಚ್ಚಿದೆ. ಇದನ್ನು ನಿಯಂತ್ರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ , ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ಶೇ.5ಕ್ಕಿಂತಲೂ ಕಡಿಮೆ ಪಾಸಿಟಿವಿಟಿ ರೇಟ್ ಇರಬೇಕು. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ಈ ಪ್ರಮಾಣ ಹೆಚ್ಚಳವಾಗಿದೆ. ನಿಯಂತ್ರಣಕ್ಕೆ ಸೂಚಿಸಲಾಗಿದೆ. ಎಂದು ತಿಳಿಸಿದರು.
ಜನಸಂಖ್ಯೆ ಆಧಾರದಲ್ಲಿ ಲಸಿಕೆ
ಇನ್ನೊಂದೆರಡು ದಿನದಲ್ಲಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ಬರಲಿದೆ. ಜನಸಂಖ್ಯೆ ಆಧಾರದ ಮೇಲೆ ಜಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಸಿಎಂ ಹೇಳಿಕೆಯ ವಿಡಿಯೋ ರಿಪೋರ್ಟ್ ಇಲ್ಲಿದೆ
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422