ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿಕಾರಿಪುರ: ಪಟ್ಟಣದಲ್ಲಿ ವಿದ್ಯುತ್ ಲೈನ್ ದುರಸ್ತಿ ಕಾರ್ಯದ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೆಸ್ಕಾಂ ಲೈನ್ ಮ್ಯಾನ್ (lineman) ಹರೀಶ್ (45) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಗೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಅದನ್ನು ಸರಿಪಡಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
Lineman-Harish-succumbed-at-Shikaripura

ಕೆಇಬಿ ಸಬ್ ಸ್ಟೇಶನ್ ಎದುರು ಲೈನ್ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಹರೀಶ್ ಅವರು ಮೃತಪಟ್ಟಿದ್ದಾರೆ. ಕೆಲವು ತಿಂಗಳ ಹಿಂದೆಯಷ್ಟೇ ಧರ್ಮಸ್ಥಳ ಭಾಗದಿಂದ ಶಿಕಾರಿಪುರಕ್ಕೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದರು. ಘಟನೆ ಸಂಬಂಧ ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Lineman-Harish-succumbed-at-Shikaripura

ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

Sunrise Facility Services, Sri sai Trust Shimoga

Leave a Comment