ಲಂಚ ಪಡೆಯುತ್ತಿದ್ದ ಪಿಡಿಒ ಶಿವಮೊಗ್ಗ ಲೋಕಾಯುಕ್ತ ಬಲೆಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 NOVEMBER 2023

SHIKARIPURA : ಲಂಚ ಪಡೆಯುತ್ತಿದ್ದ ಸಂದರ್ಭ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಒಬ್ಬರ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಪಿಡಿಒನನ್ನು ಬಂಧಿಸಲಾಗಿದೆ.

ಶಿಕಾರಿಪುರ ತಾಲೂಕು ಬಗನಕಟ್ಟೆ ಪಿಡಿಒ ಮಂಜುನಾಥ್ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಂಕ್ಲಾಪುರ ನಿವಾಸಿ ಸಾಕಮ್ಮ ಅವರ ಮನೆಯ ಚಾವಣಿ ಮತ್ತು ಗೋಡೆ 2021ರಲ್ಲಿ ಮಳೆಯಿಂದ ಕುಸಿದು ಬಿದ್ದತ್ತು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ ನಿರ್ಮಾಣಕ್ಕಾಗಿ ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಜಿಪಿಎಸ್‍ನಲ್ಲಿ ಮಾಹಿತಿ ಸಂಗ್ರಹಿಸಿ ವರದಿ ಮಾಡಲು ಬಗನಕಟ್ಟೆ ಗ್ರಾಮ ಪಂಚಾಯತಿ ಪಿಡಿಒ ಮಂಜುನಾಥ್ ಅವರು ಸಾಕಮ್ಮ ಅವರಿಂದ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಲ್ಲಿ 13 ಸಾವಿರ ರೂ. ಈಗಾಗಲೆ ಪಡೆದಿದ್ದರು. ಬಾಕಿ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೃಹತ್‌ ಸ್ವದೇಶಿ ಮೇಳ, ಮಳಿಗೆಗೆ ಬುಕ್ಕಿಂಗ್‌ ಆರಂಭ, ಯಾವಾಗ ನಡೆಯುತ್ತೆ ಮೇಳ?

ಪಿಡಿಒ ವಿರುದ್ಧ ಸಾಕಮ್ಮ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್ ಈಶ್ವರ ನಾಯ್ಕ, ಪೊಲೀಸ್ ನಿರೀಕ್ಷಕ ಸುರೇಶ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment