ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 NOVEMBER 2023
SHIKARIPURA : ತಾಲ್ಲೂಕಿನ ಜನತೆಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ನಿರ್ವಹಣೆ ಕುರಿತು ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಸಚಿವರು ಹೇಳಿದ್ದೇನು?
ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸುವ ಕಾರ್ಯ ಆಗಿಲ್ಲ ಎಂದು ಸಾರ್ವನಿಕರಿಂದ ದೂರುಗಳು ಬಂದಿವೆ. ಅಧಿಕಾರಿಗಳು ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕುಡಿಯುವ ನೀರಿಗೆ ಕೊರತೆ ಆಗಬಾರದು ಎಂದು ಅವರು ತಿಳಿಸಿದರು.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್ ಶಾಕ್ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?
ಅರಣ್ಯ ಇಲಾಖೆ ಅಧಿಕಾರಿಗಳು ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. ಹೊಸದಾಗಿ ಭೂಮಿ ಸಾಗುವಳಿ ಮಾಡಲು ಬಿಡಬೇಡಿ. ಸರ್ಕಾರದ ಯೋಜನೆ ಸಮರ್ಪಕವಾಗಿ ಜನರಿಗೆ ತಲುಪಿಸಬೇಕು ಎಂದು ಅವರು ಸೂಚಿಸಿದರು.
ತಾಲೂಕಿನಲ್ಲಿ ಜನವರಿ ತಿಂಗಳವರೆಗೆ ಕುಡಿಯುವ ನೀರಿಗೆ ಯಾವುದೆ ಸಮಸ್ಯೆ ಆಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ವಿಶ್ವನಾಥ್, ಇ.ಒ ಪರಮೇಶ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














