ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 NOVEMBER 2024
ಶಿಕಾರಿಪುರ : ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ ಶಾಲೆಗೆ ಇವತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ (Visit) ನೀಡಿದ್ದರು. ಶಾಲೆ ಆವರಣದಲ್ಲಿ ಓಡಾಡಿ, ತಮ್ಮ ತಂದೆಯ ನೆನಪು ಮಾಡಿಕೊಂಡರು.
ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು. ಈ ಸಂದರ್ಭ ಮಕ್ಕಳು ಹೂವು ನೀಡಿ ಸಚಿವರನ್ನು ಸ್ವಾಗತಿಸಿದರು.
ಸರ್ಕಾರಿ ಶಾಲೆಗಳಲ್ಲಿ ಓದಿದ ಹಲವರು ದೊಡ್ಡ ಹುದ್ದೆಗಳನ್ನು ಅಲಂಕರಿಸಿದ್ದಾರೆ. ನಮ್ಮ ತಂದೆ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ಅನೇಕ ಜನಪರ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಅದೇ ಹಾದಿಯಲ್ಲಿ ನಾನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಶಿರಾಳಕೊಪ್ಪದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ.
ಮಧು ಬಂಗಾರಪ್ಪ, ಶಿಕ್ಷಣ ಸಚಿವ
ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಶಿಕ್ಷಕರು ಇದ್ದರು.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಗೆ ಮಿನಿಸ್ಟರ್ ದಿಢೀರ್ ಭೇಟಿ, ಅಧಿಕಾರಿ ಸಸ್ಪೆಂಡ್
Madhu Bangarappa visit Shiralakoppa School
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422