ದುರ್ವಾಸನೆ ಹಿನ್ನೆಲೆ ಪರಿಶೀಲಿಸಿದ ಸ್ಥಳೀಯರಿಗೆ ಕಾಣಿಸ್ತು ಚಿರತೆ ಮೃತದೇಹ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿರಾಳಕೊಪ್ಪ: ಪಟ್ಟಣ ಸಮೀಪದ ತಾಳಗುಂದದ ವೀರಭದ್ರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು (Male leopard) ಮೃತಪಟ್ಟಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಕೊರಳಿಗೆ ಸಿಕ್ಕಿ ಹಾಕಿಕೊಂಡಿದ್ದ ಉರುಳಿನಿಂದ (snare trap) ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಚಿರತೆ ಮೃತಪಟ್ಟಿದೆ.

ಕಳೆದ ಎರಡು ಮೂರು ದಿನಗಳ ಹಿಂದೆಯೆ ಚಿರತೆ ಸಾವನ್ನಪ್ಪಿರುವ ಸಾಧ್ಯತೆಯಿದೆ. ತೀವ್ರವಾಗಿ ದುರ್ವಾಸನೆ ಹರಡಿದ ಹಿನ್ನೆಲೆ ಸ್ಥಳೀಯರು ವಿಷಯವನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Male-leopard-found-dead-near-talagunda-in-Shiralakoppa

ಇದನ್ನೂ ಓದಿ » ಮರಕ್ಕೆ ಬೈಕ್‌ ಡಿಕ್ಕಿ, ಬೈಕ್‌ನ ಹಿಂಬದಿ ಸವಾರ ಸಾವು

ಇದು ಸುಮಾರು ನಾಲ್ಕರಿಂದ ಐದು ವರ್ಷ ವಯಸ್ಸಿನ ಗಂಡು ಚಿರತೆಯಾಗಿದ್ದು, ಘಟನೆ ಸಂಬಂಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ವಲಯ ಅರಣ್ಯ ಅಧಿಕಾರಿ ಜಾವೀದ್ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment