BREAKING NEWS – ತೀರ್ಥಹಳ್ಳಿಯ ಮಠದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಕಾಲಿಗೆ ಶಿಕಾರಿಪುರದಲ್ಲಿ ಗುಂಡೇಟು

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿಕಾರಿಪುರ : ತೀರ್ಥಹಳ್ಳಿಯ ಮಹಿಷಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್‌ (Police) ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ ಹಿನ್ನೆಲೆ ಪೊಲೀಸರು ಆರೋಪಿಯ ಎಡಗಾಲಿಗೆ ಗುಂಡು ಹೊಡೆದಿದ್ದಾರೆ.

ಶಿಕಾರಿಪುರ ಪಟ್ಟಣದ ಟ್ಯಾಂಕ್‌ ಬಂಡ್‌ ಸಮೀಪ ಆರೋಪಿ ಶ್ರೀನಿವಾಸ ಅಲಿಯಾಸ್‌ ಸೀನಾ (25) ಎಂಬಾತನನ್ನು ಬಂಧಿಸಲು ತೀರ್ಥಹಳ್ಳಿಯ ಮಾಳೂರು ಠಾಣೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಶ್ರೀನಿವಾಸ, ಪೊಲೀಸ್‌ ಸಿಬ್ಬಂದಿ ಸಂತೋಷ್‌ ಅವರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ಸಂದರ್ಭ ಮಾಳೂರು ಠಾಣೆ ಪಿಎಸ್‌ಐ ಕುಮಾರ್‌ ಅವರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.

Nirantara-Ladies-PG-Shimoga.

ಆದರು ಶ್ರೀನಿವಾಸ, ಪೊಲೀಸ್‌ (Police) ಸಿಬ್ಬಂದಿ ಸಂತೋಷ್‌ ಮೇಲೆ ಮತ್ತೊಮ್ಮೆ ದಾಳಿಗೆ ಯತ್ನಿಸಿದ್ದಾನೆ. ಈ ಹಿನ್ನೆಲೆ ಆತನ ಎಡಗಾಲಿಗೆ ಪಿಎಸ್‌ಐ ಕುಮಾರ್‌ ಅವರು ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಮಂಜುನಾಥ ಗೌಡ ಅರೆಸ್ಟ್‌, EDಗೆ 3 ಪ್ರಮುಖ ಸೂಚನೆ ನೀಡಿದ ಕೋರ್ಟ್‌, ಈತನಕ ಏನೇನೆಲ್ಲ ಆಗಿದೆ? ಇಲ್ಲಿದೆ ಡಿಟೇಲ್ಸ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

Leave a Comment