ಮೆಕ್ಕೆಜೋಳದ ಹೊಲದಲ್ಲಿ ಕೈ, ಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಶಿಕಾರಿಪುರ: ತಾಲ್ಲೂಕಿನ ಮಳವಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಸಾವು ಕಂಡಿದ್ದಾರೆ. ಕಾಲು ಹಾಗೂ ಕೈಗಳನ್ನು ಕಟ್ಟಿ ಹಾಕಿರುವ ರೀತಿಯಲ್ಲಿ ಮೆಕ್ಕೆಜೋಳದ ಹೊಲದಲ್ಲಿ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಒಡಕೇಶಪ್ಪ (31) ಎಂದು ಗುರುತಿಸಲಾಗಿದೆ. ಕೈ ಕಟ್ಟಿ ಬಾಯಿಗೆ ವಿಷ ಹಾಕಿ ದುಷ್ಕರ್ಮಿಗಳು ಈ ಕೃತ್ಯ ಎಸಗಿರಬಹುದು ಎಂದು ತೀವ್ರ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎಎಸ್‌ಪಿ ಕಾರಿಯಪ್ಪ ಹಾಗೂ ಪಿಎಸ್ಐ ಪ್ರಶಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Person-found-dead-at-Jower-Field-in-Malavalli-village-in-Shikaripura

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ