ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ ಅವರೊಂದಿಗೆ ಬಾಗಿನ ಅರ್ಪಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಜಲಾಶಯ ಸುಮಾರು 7 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿದೆ. ವಿಶೇಷವಾದ ಗೋಡ್ಬೋಲೆ ಗೇಟ್ಗಳನ್ನು ಅಂಜನಾಪುರ ಜಲಾಶಯಕ್ಕೆ ಅಳವಡಿಸಲಾಗಿದೆ ಎಂದರು.
ಅಕ್ಕಪಕ್ಕದ ಊರಿಗೆ ಪೈಪ್ಲೈನ್
ಅಂಜನಾಪುರ ಜಲಾಶಯದ ಪಕ್ಕದಲ್ಲಿದ್ದರೂ ಹಾರೋಗೊಪ್ಪ, ಅತ್ತಿಬೈಲು, ತರಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ ನೀರಾವರಿ ಸೌಲಭ್ಯವಿಲ್ಲ. ಪೈಪ್ ಮೂಲಕ ಈ ಗ್ರಾಮಗಳಿಗೆ ನೀರು ಹರಿಸಲಾಗುತ್ತದೆ. ಶಾಶ್ವತ ನೀರಾವರಿ ಯೋಜನೆ ಜಾರಿ ಈ ಭಾಗದ ರೈತರಿಗೆ ನೀರಿನ ಸಮಸ್ಯೆ ನಿವಾರಿಸಲಿದೆ ಎಂದರು.
ಲೋಕಾರ್ಪಣೆ ಮಾಡ್ತಾರೆ ಸಿಎಂ
ಬಹುನಿರೀಕ್ಷಿತ ಹೊಸಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳ್ಳಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯೋಜನೆಯ ಲೋಕಾರ್ಪಣೆ ಮಾಡಲಿದ್ದಾರೆ. ಪುರದಕೆರೆ ಏತ ನೀರಾವಾರಿ ಯೋಜನೆ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ. ತಾಳಗುಂದ, ಉಡುಗಣಿ, ಹೊಸೂರು ಹೋಬಳಿ ರೈತರಿಗೆ ನೀರು ಪೂರೈಸಬಹುದಾಗಿದೆ ಎಂದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ಲಕ್ಷ್ಮೀ ಮಹಾಲಿಂಗಪ್ಪ, ಪ್ರಮುಖರಾದ ಗಾಯತ್ರಿದೇವಿ ಮಲ್ಲಪ್ಪ, ಕೊಳಗಿ ರೇವಣಪ್ಪ, ಕೆ.ಹಾಲಪ್ಪ, ಸುಕೇಂದ್ರಪ್ಪ, ಟಿ.ಎಸ್.ಮೋಹನ್, ಶಶಿಧರ್ ಚುರ್ಚಿಗುಂಡಿ, ಸುರೇಶ್ ನಾಯ್ಕ, ಯತೀಶ್ಚಂದ್ರ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200