ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020
ಶಿಕಾರಿಪುರವನ್ನು ಜಿಲ್ಲೆ ಮಾಡುವ ಉದ್ದೇಶವಿಲ್ಲ. ಆದರೆ ಜಿಲ್ಲಾ ಕೇಂದ್ರಕ್ಕೆ ಸರಿಸಮನಾಗಿ ಶಿಕಾರಿಪುರವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಶಿಕಾರಿಪುರ ತಾಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, 6 ಕೋಟಿಯ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ ಸಂಸದ ರಾಘವೇಂದ್ರ, ಶಿಕಾರಿಪುರವನ್ನು ಜಿಲ್ಲೆ ಮಾಡುವುದಿಲ್ಲ ಎಂದರು.
ಕರೋನ ಕಾಲದಲ್ಲೂ ಅಭಿವೃದ್ಧಿ ಕಾಣುತ್ತಿರುವ ಏಕೈಕ ತಾಲೂಕು ಎಂದರೆ ಶಿಕಾರಿಪುರ. ಗುಂಡೂರಾವ್ ಅವರ ಸರ್ಕಾರವಿದ್ದಾಗಲೇ ಕಲ್ಲೊಡ್ಡು ಯೋಜನೆ ಪ್ರಸ್ತಾಪವಿತ್ತು. ಈ ಯೋಜನೆಯಿಂದ ಸಾಗರದಲ್ಲಿ ದೊಡ್ಡ ಪ್ರಮಾಣದ ಜಮೀನು ಮುಳುಗಡೆಯಾಗಲಿದೆ ಎಂಬ ಆತಂಕವಿದೆ. ಹೆಚ್ಚು ಭೂಮಿ ಮುಳುಗಡೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]