ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಸೆಪ್ಟಂಬರ್ 2020
ಹೊಸಳ್ಳಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಸ್ಥಳಕ್ಕೆ ಅಂಜನಾಪುರ ಹೋಬಳಿ ರೈತರೊಂದಿಗೆ ತೆರಳಿದ ಸಂಸದ ಬಿ.ವೈ.ರಾಘವೇಂದ್ರ, ಕಾಮಗಾರಿಯ ಪರಿಶೀಲನೆ ನಡೆಸಿದರು. ಅಲ್ಲದೆ ನೀರಾವರಿ ಯೋಜನೆ ಕುರಿತು ರೈತರಿಗೆ ಮಾಹಿತಿ ನೀಡಿದರು.
ಏತ ನೀರಾವರಿ ಯೋಜನೆ ಮೂಲಕ ಅಂಜನಾಪುರ ಜಲಾಶಯಕ್ಕೆ ನೀರು ಹರಿಸಲಾಗುತ್ತದೆ. 250 ಕೋಟಿಯ ಈ ಯೋಜನೆಯಿಂದ ಶಿಕಾರಿಪುರದ 18 ಗ್ರಾಮಗಳು, ಶಿವಮೊಗ್ಗದ 32 ಗ್ರಾಮಗಳಿಗೆ ನೀರು ಹರಿಸಲಾಗುತ್ತದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಗಳಿಗು ಕುಡಿಯುವ ನೀರಿನ ಅನುಕೂಲ ಆಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಅರುಂಧತಿ, ತಾಲೂಕು ಪಂಚಾಯಿತಿ ಸದಸ್ಯ ಸುರೇಶ್ ನಾಯ್ಕ, ಶಶಿಧರ ಚುರ್ಚಿಗುಂಡಿ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಎಪಿಎಂಸಿ ಅಧ್ಯಕ್ಷ ರುದ್ರಮುನಿ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]