ಶಿಕಾರಿಪುರ ಪುರಸಭೆಯ ಮಹತ್ವದ ಆದೇಶ, ತಪ್ಪಿದಲ್ಲಿ ದಂಡ ಕಟ್ಟಿಸಿಕೊಳ್ಳುವ ಎಚ್ಚರಿಕೆ

ಶಿಕಾರಿಪುರ: ಪುರಸಭೆ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅವುಗಳ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಶಿಕಾರಿಪುರ ಪುರಸಭೆಯ ಮುಖ್ಯಾಧಿಕಾರಿಗಳಿಗೆ ತಿಳಿಸುವಂತೆ ಸೂಚಿಸಲಾಗಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಬೇಕು. ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಯ ವತಿಯಿಂದ ಒಬ್ಬ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು.

Shikaripura Municipality

Shivamogga Live Promotion

ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಕಾಯ್ದೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ

ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಛವನ್ನು ಆ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು. ಸರ್ವೋಚ್ಛ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಶಿಕಾರಿಪುರ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment