ಶಿವಮೊಗ್ಗ ಲೈವ್.ಕಾಂ | SHIKARIPURA | 24 ಡಿಸೆಂಬರ್ 2019
ಹೊಸ ವರ್ಷಕ್ಕೆ ಶಿವಮೊಗ್ಗದಿಂದ ಮತ್ತೆರಡು ಹೊಸ ರೈಲು ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಶಿಕಾರಿಪುರದ ಚನ್ನಕೇಶವ ನಗರದಲ್ಲಿ ಸುಗಂಧ ಬಳಗದ 14ನೇ ವರ್ಷದ ಸ್ನೇಹ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈಗಾಗಲೇ ಶಿವಮೊಗ್ಗದಿಂದ ಚೆನ್ನೈ, ತಿರುಪತಿ, ಮೈಸೂರಿಗೆ ಮೂರು ರೈಲು ಸಂಚಾರ ಆರಂಭಿಸಿವೆ. ಹೊಸ ವರ್ಷಕ್ಕೆ ಇನ್ನು ಎರಡು ಹೊಸ ರೈಲುಗಳ ಸಂಚಾರ ಆರಂಭವಾಗಲಿದೆ ಎಂದರು.
ಇನ್ನು ಮೂರು ವರ್ಷದಲ್ಲಿ ಶಿವಮೊಗ್ಗದಿಂದ ಶಿಕಾರಿಪುರ ಮಾರ್ಗವಾಗಿ ರಾಣೆಬೆನ್ನೂರಿಗೆ ರೈಲು ಸಂಚಾರ ಆರಂಭಗೊಳ್ಳಲಿದೆ. ಹಾಗೆಯೇ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ 150 ಕೋಟಿ ರೂ. ಅಗತ್ಯವಿದೆ. ಈ ಕಾಮಗಾರಿಯು ಶರವೇಗದಲ್ಲಿ ನಡೆಯಲಿದೆ. ಇನ್ನು, ಶಿಕಾರಿಪುರ ತಾಲೂಕಿನ ನೀರಾವರಿ ಯೋಜನೆಗೆ 1250 ಕೋಟಿ ರೂ. ಅನುದಾನ ನೀಡಲಾಗಿದೆ. ಸಂಡ ಗ್ರಾಮದಲ್ಲಿ ಇನ್ನು ಎರಡ್ಮೂರು ಕೈಗಾರಿಕೆಗಳು ಆರಂಭವಾಗಲಿದೆ ಎಂದರು.
ಬಳಗದ ಅಧ್ಯಕ್ಷ ಎಂ.ಜಿ.ಪ್ರಕಾಶ್, ತಹಶೀಲ್ದಾರ್ ಎಂ.ಪಿ.ಕವಿರಾಜ್, ಸಿಪಿಐ ಬಸವರಾಜು, ಡಿಹೆಚ್ಒ ಡಾ.ರಾಜೇಶ್ ಸುರಗೀಹಳ್ಳಿ, ಟಿಹೆಚ್ಒ ಡಾ.ಚಂದ್ರಪ್ಪ, ಡಾ.ಶ್ರೀನಿವಾಸ್, ವೀರಶೈವ ಮಹಾಸಭಾ ಅಧ್ಯಕ್ಷ ಎನ್.ವಿ.ಈರೇಶ್, ಪುರಸಭಾ ಸದಸ್ಯ ಪಾಲಾಕ್ಷಪ್ಪ, ನೇತ್ರಾವತಿ ಸಂತೋಷ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200