ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019
ಶಿಕಾರಿಪುರ ಪಟ್ಟಣದಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್, ಕೈಚೀಲಗಳನ್ನು ಮಾರಾಟ ಮಾಡದಂತೆ ಪುರಸಭೆ ಪ್ರಕಟಣೆ ಹೊರಡಿಸಿದೆ.
ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಸಲುವಾಗಿ, ಪುರಸಭೆ ಈ ಸೂಚನೆ ನೀಡಿದೆ. ಇದರಂತೆ ಪಟ್ಟಣಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಪ್ಲಾಸ್ಟಿಕ್ ಕವರ್ ಬದಲು ಬಟ್ಟೆ ಬ್ಯಾಗ್ ಬಳಸುವಂತೆ, ಸಾರ್ವಜನಿಕರು ಮತ್ತು ಅಂಗಡಿ ಮಾಲೀಕರಿಗೆ ಪುರಸಭೆ ಮನವಿ ಮಾಡಿದೆ.
ಇನ್ನು, ಬೇಸಿಗೆ ಕಾಲವಾಗಿರುವುದರಿಂದ ನೀರನ್ನು ಮಿತವಾಗಿ ಉಪಯೋಗಿಸಬೇಕು. ಒಂದು ವೇಳೆ, ಎಲ್ಲಿಯಾದರೂ ನೀರು ಪೋಲಾಗುತ್ತಿರುವುದು ಗಮನಕ್ಕೆ ಬಂದರೆ, ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಹಾಗೆಯೇ, ಶಿಕಾರಿಪುರ ಪಟ್ಟಣವನ್ನು ಕಸಮುಕ್ತಗೊಳಿಸಬೇಕು ಎಂದು ಪುರಸಭೆ ಮನವಿ ಮಾಡಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]