ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 MAY 2021
ಮಾರುಕಟ್ಟೆಯಲ್ಲಿ ಜನರು ಅನಗತ್ಯವಾಗಿ ಗುಂಪುಗೂಡುವುದನ್ನು ತಡೆಯಲು ವ್ಯಾಪಾರಿಗಳಿಗೆ ಪಾಸ್ ನೀಡಲು ಶಿಕಾರಿಪುರ ತಾಲೂಕು ಆಡಳಿತ ನಿರ್ಧರಿಸಿದೆ.
ಶನಿವಾರ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿ ತಹಶೀಲ್ದಾರ್ ಎಂ.ಪಿ.ಕವಿರಾಜ್, ಕಳೆದ ವರ್ಷ ತರಕಾರಿ ವ್ಯಾಪಾರಿಗಳಿಗೆ ಪಾಸ್ ನೀಡಲಾಗಿತ್ತು. ಅದೆ ಮಾದರಿ ಪಾಸ್ ವಿತರಿಸಿ, ಆಯಾ ವಾರ್ಡ್‍ನಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದರೆ ಜನ ಗುಂಪುಗೂಡುವುದು ತಪ್ಪಿಸಿದಂತಾಗುತ್ತದೆ ಎಂದರು.
ಸೋಮವಾರದಿಂದ ಶಿಕಾರಿಪುರದಲ್ಲಿ ತರಕಾರಿ ವ್ಯಾಪಾರಿಗಳು, ಮಾಸ್ಕ್ ಧರಿಸಿ, ಪಾಸ್ ಹಿಡಿದು, ಕೋವಿಡ್ ನಿಯಮಗಳನ್ನು ಪಾಲಿಸಿ ವ್ಯಾಪಾರ ನಡೆಸಲಿದ್ದಾರೆ.
ಪುರಸಭೆ ಅಧ್ಯಕ್ಷರಾದ ಲಕ್ಷ್ಮೀ ಮಹಾಲಿಂಗಪ್ಪ, ಟಿಹೆಚ್‍ಒ ಡಾ.ಚಂದ್ರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷರಾದ ರೇಣುಕಸ್ವಾಮಿ, ಸದಸ್ಯರಾದ ನಾಗರಾಜ ಗೌಡ, ಪಾಲಾಕ್ಷಪ್ಪ, ರೂಪಕಲಾ ಹೆಗ್ಡೆ, ಪ್ರಶಾಂತ್ ಜೀನಳ್ಳಿ, ಉಳ್ಳಿ ದರ್ಶನ್, ರೂಪಾ ಮಂಜುನಾಥ್, ಗುರುರಾಜ್ ಜಗತಾಪ್, ರೋಷನ್, ವಿಶ್ವನಾಥ್, ಬಿಇಒ ಉಮಾ ಮಹೇಶ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422