ಶಿವಮೊಗ್ಗ ಲೈವ್.ಕಾಂ | SHIKARIPURA NEWS | 23 DECEMBER 2020
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಉಪನ್ಯಾಸಕರು ಮನವಿ ಮಾಡಿದರು.
ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘದ ವತಿಯಿಂದ ಶಿಕಾರಿಪುರದಲ್ಲಿ ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಕೋವಿಡ್ ಲಾಕ್ಡೌನ್ ಹಿನ್ನೆಲೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸುತ್ತಿದ್ದೇವೆ. ಹೀಗಿದ್ದೂ ಎಂಟು ತಿಂಗಳಿಂದ ಸರ್ಕಾರ ಗೌರವಧನ ನೀಡಿಲ್ಲ. ಮಾನವೀಯ ದೃಷ್ಟಿಯಂದ ಇತ್ತೀಚೆಗಷ್ಟೇ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ. ಅದೆ ರೀತಿ ರಾಜ್ಯಾದ್ಯಂತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 700ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಗೂ ಗೌರವಧನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಂಸದ ಬಿ.ವೈ.ರಾಘವೇಂದ್ರ, ಬೇಡಿಕೆಗಳ ಕುರಿತು ಸರ್ಕಾರದ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200