SHIVAMOGGA LIVE NEWS | 19 JUNE 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIKARIPURA : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಖಂಡಿಸಿ, ನಟ (Actor) ದರ್ಶನ್‌ಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಪಟ್ಟಣದಲ್ಲಿ ವೀರಶೈವ ಮಹಾಸಭೆ ವತಿಯಿಂದ ಬಸ್‌ನಿಲ್ದಾಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪ್ರತಿಕ್ರಿಯೆಗೆ ನಟ ದರ್ಶನ್ ತಮ್ಮ ಅಭಿಮಾನಿಗೆ ಕಿರುಕುಳ ನೀಡಿ ಹತ್ಯೆ ಮಾಡಿರುವುದು ಸಮಾಜ ತಲೆತಗ್ಗಿಸುವಂತಹದ್ದು. ಘಟನೆ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದ್ದು ಅದಕ್ಕೆ ಪೊಲೀಸರು ಅವಕಾಶ ನೀಡಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವೀರಶೈವ ಮಹಾಸಭೆ ಅಧ್ಯಕ್ಷ ಎನ್.ವಿ.ಈರೇಶ್, ಪ್ರಮುಖರಾದ ಕುಮಾರಸ್ವಾಮಿ, ಶಿವಾನಂದಶಾಸ್ತ್ರಿ, ಆಶ್ವಿನ್ ಕಡ್ಡಿಪುಡಿ, ಪುಟ್ಟಸ್ವಾಮಿ, ಪ್ರಭುಸ್ವಾಮಿ ಸಾಲೂರು, ಕಾಂಚನ ಕುಮಾರ್, ಜ್ಯೋತಿಸಿದ್ದ ಲಿಂಗೇಶ್, ಹೇಮಾವತಿ ಹಿರೇಮಠ, ಶಶಿಧರ ಸ್ವಾಮಿ ಕಣಿವೆಮನೆ, ವೀರನಗೌಡ, ಚನ್ನವೀರಯ್ಯ ಇತರರಿದ್ದರು.
ಇದನ್ನೂ ಓದಿ – ಪೆಟ್ರೋಲ್ ದರ ಇಳಿಸುವ ತನಕ ಹೋರಾಟ, ಶಿವಮೊಗ್ಗದಲ್ಲಿ ಪ್ರತಿಭಟನೆ ಸ್ವರೂಪ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






