SAGARA :ಮೈಸೂರಿನನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
‘ಡಿ.26ರಂದು ಮಾರ್ಗಶಿರ ಹುಣ್ಣಿಮೆಯಂದು ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಅಂಧಕಾಸುರನ ಸಂಹಾರ ಧಾರ್ಮಿಕ ಕಾರ್ಯಕ್ರಮ ನೆರೆವೇರಿಸಲಾಗುತ್ತಿತ್ತು. ಈ ಸಂದರ್ಭ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಆನಂದ ಬಾಳೆಕೊಪ್ಪ, ಕೆ.ವಿ.ಪ್ರವೀಣ್, ಸುದರ್ಶನ್, ಸಂತೋಷ್ ಶಿವಾಜಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Protest at shikaipura over disrespect to utsava murthy in Nanjanagudu in Mysore
ಶಿಕಾರಿಪುರದಲ್ಲಿಯು ಆಕ್ರೋಶ
ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಶಿಕಾರಿಪುರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ