ಅಂಗನವಾಡಿ ಸಹಾಯಕಿ ಅನುಮಾನಾಸ್ಪದ ಸಾವು ಕೇಸ್‌, ಆರೋಪಿ ಅರೆಸ್ಟ್‌

Published On : ಫೆಬ್ರವರಿ 20, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿಕಾರಿಪುರ: ಬಿಳಕಿ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿ ಪ್ರೇಮಾ (52) ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ (arrested).

ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ತೊಗರ್ಸಿ ಸಮೀಪದ ಕೋಡಿಹಳ್ಳಿ ಗ್ರಾಮದ ರಾಘವೇಂದ್ರ (26) ಎಂದು ಗುರುತಿಸಲಾಗಿದೆ. ಫೆಬ್ರವರಿ 14 ರಂದು ಬಿಳಕಿ ಗ್ರಾಮದ ಮನೆಯಲ್ಲಿ ಪ್ರೇಮಾ ಅವರ ಮೃತದೇಹ ಮೈಮೇಲೆ ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಮೃತ ಮಹಿಳೆಯ ಪುತ್ರ, ತನ್ನ ತಾಯಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Raghavendra-Arrest-in-an-anganavadi-worker-death-case

ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ರಾಘವೇಂದ್ರನನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ – ಮನೆ, ಅಡಿಕೆ ಮರಳಗಳ ಸುತ್ತಲು ಟ್ರಂಚ್‌ ನಿರ್ಮಿಸುತ್ತಿದ್ದ ಅರಣ್ಯ ಇಲಾಖೆಗೆ MLA ವಾರ್ನಿಂಗ್‌

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 20, 2026

Leave a Comment