ಅಧಿಕಾರಿಗಳ ದಾಳಿ: ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ

ಶಿಕಾರಿಪುರ: ತಾಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಮನೆಯೊಂದರ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಇಬ್ಬರು ಕಿಶೋರ ಕಾರ್ಮಿಕರನ್ನು ಅಧಿಕಾರಿಗಳ ತಂಡ ದಾಳಿ ನಡೆಸಿ ರಕ್ಷಿಸಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು ಕೆಲಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಇದನ್ನು ಆಧರಿಸಿ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು. ರಕ್ಷಿಸಲಾದ ಇಬ್ಬರು ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ.

SHIKARIPURA-NEWS-GRAPHICS-BY-SHIVAMOGGA-LIVE.

ಇದೇ ವೇಳೆ ನಿಯಮ ಉಲ್ಲಂಘಿಸಿ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಮಾಲೀಕರಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಅಧಿಕಾರಿಗಳು ಕಾನೂನು ಅರಿವು ಮೂಡಿಸಿ, ಎಚ್ಚರಿಕೆ ನೀಡಿದ್ದಾರೆ.

ಕಾನೂನು ಕ್ರಮದ ಎಚ್ಚರಿಕೆ

ಪ್ರಸ್ತುತ ಶಾಲಾ-ಕಾಲೇಜುಗಳು ಆರಂಭವಾಗಿವೆ. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಉದ್ಯಮಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ಯಮಗಳಲ್ಲಿ ಕೆಲಸಕ್ಕೆ ಇರಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

ನಿಯಮ ಮೀರಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ₹50,000 ವರೆಗೆ ದಂಡ ಅಥವಾ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಾರ್ಮಿಕ ಅಧಿಕಾರಿಗಳು ಜಂಟಿ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion