ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIKARIPURA | 18 ಜನವರಿ 2020
ಸಂಸದ ತೇಜಸ್ವಿ ಸೂರ್ಯ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ SDPI ಸಂಘಟನೆ ಸಂಚು ರೂಪಿಸಿದೆ ಎಂಬುದು ಸಾಬೀತಾಗಿದೆ. ಇಂತಹ ದೇಶದ್ರೋಹಿ ಸಂಘಟನೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಬೇಕು. ಮುಂದೆ ಈ ಸಂಘಟನೆ ತಲೆ ಎತ್ತದಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಶಿಕಾರಿಪುರ ತಾಲೂಕು ಚಿಕ್ಕಮಾಗಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, SDPI ಮತ್ತು ಪಿಎಫ್ಐ ಸಂಘಟನೆಗಳ ಕುರಿತು ಹಿಂದಿನಿಂದಲು ಹೇಳುತ್ತಿದ್ದೇವೆ. ಮಡಿಕೇರಿಯಲ್ಲಿ ಕುಟ್ಟಪ್ಪ, ಬೆಂಗಳೂರಿನ ರುದ್ರೇಶ್ ಹತ್ಯೆ ಹಿಂದೆಯೂ ಈ ಸಂಘಟನೆಗಳ ಕೈವಾಡ ಇದೆ ಎಂದು ಹೇಳಿಕೊಂಡು ಬಂದಿದ್ದೇವೆ. ಈಗ ಸಂಸದ ತೇಜಸ್ವಿ ಸೂರ್ಯ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಿರುವುದು ನಮ್ಮ ವಾದವನ್ನು ಸಾಬೀತುಪಡಿಸಿದೆ ಎಂದರು.
ಟಿಪ್ಪು ಅಧ್ಯಾಯ ಕುರಿತು ನಾಳೆ ಚರ್ಚೆ
ಶಾಲಾ ಪಠ್ಯ ಪುಸ್ತಕದಲ್ಲಿ ಟಿಪ್ಪು ಅಧ್ಯಾಯದ ಕುರಿತು ಇತಿಹಾಸಕಾರರ ಸದಸ್ಯರನ್ನೊಳಗೊಂಡ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ನಾಳೆ ಚರ್ಚೆ ನಡೆಸಲಿದ್ದೇನೆ. ಆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Education Minister Suresh Kumar visited shikaripura. He spoke to media about permanent ban on SDPI and PFI
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422