ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 MARCH 2023
SHIKARIPURA : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ (Stone Pelting) ಮಾಡಿದ ಹಿನ್ನೆಲೆ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಪೊಲೀಸ್ ಇಲಾಖೆ ನಿಷೇಧಾಜ್ಞೆ ಜಾರಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ ಶಿಕಾರಿಪುರ ಪಟ್ಟಣದಲ್ಲಿ ವಾತಾವರಣ ಶಾಂತವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪರಿಶಿಷ್ಟ ಜಾತಿ, ಪಂಡಗದವರಿಗೆ ಮೀಸಲಾತಿ ಪ್ರಮಾಣ ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿ ಶಿಕಾರಿಪುರದಲ್ಲಿ ಇವತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆ ವೇಳೆ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಿದರು. ಕಲ್ಲು ತೂರಾಟ (Stone Pelting) ಮಾಡಿ ಮನೆಯ ಕಿಟಕಿ ಗಾಜು ಒಡೆದರು.
ಸದ್ಯ ಪರಿಸ್ಥಿತಿ ಶಾಂತ
ಶಿಕಾರಿಪುರ ಪಟ್ಟಣದ ವಿವಿಧೆಡೆ ಹಾಕಲಾಗಿದ್ದ ಸರ್ಕಾರದ ಜಾಹೀರಾತು ಫಲಕಗಳನ್ನು ಉದ್ರಿಕ್ತರು ಕಿತ್ತು ಹಾಕಿದರು. ಫ್ಲೆಕ್ಸ್ ಗಳನ್ನು ಹರಿದರು. ಸೀರೆಗಳನ್ನು ತಂದು ನಡು ಬೀದಿಯಲ್ಲಿ ಬಿಸಾಡಿ ಬೆಂಕಿ ಹಚ್ಚಿದ್ದರು. ಇದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೆ ಮಾಲೀಕರು ಅಂಗಡಿ ಮುಂಗಟ್ಟು ಬಂದ್ ಮಾಡಿದರು. ಉದ್ರಿಕ್ತರನ್ನು ಚದುರಿಸಿದ ಪೊಲೀಸರು ಪರಿಸ್ಥಿತಿ ತಹಬಂಧಿಗೆ ತಂದಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಹೆಚ್ಚುವರಿ ಪೊಲೀಸ್ ಪಡೆಯನ್ನು ಶಿಕಾರಿಪುರದಲ್ಲಿ ನಿಯೋಜನೆ ಮಾಡಲಾಗಿದೆ.
‘ನಿಷೇಧಾಜ್ಞೆ ಜಾರಿ ಮಾಡಿಲ್ಲ’
ಈ ನಡುವೆ ಶಿಕಾರಿಪುರ ಪಟ್ಟಣದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಪಟ್ಟಣದ ಜನರು ತೀವ್ರ ಆತಂಕಕ್ಕೀಡಾಗಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ‘ಶಿಕಾರಿಪುರದಲ್ಲಿ ಸೆಕ್ಷನ್ 144 ಜಾರಿಗೊಳಿಸಿಲ್ಲ’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಬ್ಯಾನರ್, ಸೀರೆಗೆ ಬೆಂಕಿ, ಲಾಠಿ ಚಾರ್ಜ್