SHIVAMOGGA LIVE NEWS | 18 MARCH 2023
SHIKARIPURA : ಪಟ್ಟಣದಲ್ಲಿ ನಿರ್ಮಿಸಿರುವ ಸುಸಜ್ಜಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ (Bus Stand), ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಅವರು, 4.80 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ (Bus Stand) ಪೂರ್ಣಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುವಂತಹ ಬಸ್ ನಿಲ್ದಾಣವನ್ನು ತಾಲೂಕು ಕೇಂದ್ರದಲ್ಲಿ ನಿರ್ಮಿಸಲಾಗಿದೆ. ಇಂದಿನಿಂದಲೇ 20 ನೂತನ ಬಸ್ಗಳಿಗೆ ಚಾಲನೆ ನೀಡುತ್ತಿರುವುದು ಹರ್ಷ ತಂದಿದೆ ಎಂದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಭಾರತಿಶೆಟ್ಟಿ, ಪುರಸಭಾ ಅಧ್ಯಕ್ಷೆ ರೇಖಾಬಾಯಿ, ಪದ್ಮನಾಭ ಭಟ್, ಎಸ್.ಎಸ್. ಜ್ಯೋತಿಪ್ರಕಾಶ್ ಮತ್ತಿತರರು ಹಾಜರಿದ್ದರು.