ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIKARIPURA NEWS, 21 SEPTEMBER 2024 : ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಇದನ್ನು ಖಂಡಿಸಿ ಸೆ.26ರಂದು ಪಟ್ಟಣವನ್ನು ಸಂಪೂರ್ಣವಾಗಿ ಬಂದ್ (Bandh) ಮಾಡಲು ನಿರ್ಧರಿಸಲಾಗಿದೆ ಎಂದು ತಾಲ್ಲೂಕು ಅಹಿಂದ ಒಕ್ಕೂಟದ ಯುವ ಘಟಕದ ಅಧ್ಯಕ್ಷ ನಗರದ ಮಾಲತೇಶ ಹೇಳಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜಕಾರಣದಲ್ಲಿ ಬಿಳಿ ಹಾಳೆಯಂತಿರುವ ಸಿದ್ದರಾಮಯ್ಯನವರಿಗೆ ಕಳಂಕ ಅಂಟಿಸಲು ಕುತಂತ್ರ ನಡೆಸಿದ್ದಾರೆ. ಈ ಉದ್ದೇಶಕ್ಕಾಗಿ ಮುಡಾ ಹಗರಣ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬಿಜೆಪಿ, ಜೆಡಿಎಸ್ ನಾಯಕರ ಕುತಂತ್ರವನ್ನು ಖಂಡಿಸಿ ಬಂದ್ಗೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್ ಮಾಡಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಪುರಸಭೆ ಸದಸ್ಯ ಉಳ್ಳಿ ದರ್ಶನ್, ಭಂಡಾರಿ ಮಾಲತೇಶ್, ತಾಲ್ಲೂಕು ಅಹಿಂದ ಸಂಘಟನೆ ಅಧ್ಯಕ್ಷ ಕಾಗಿನಲ್ಲಿ ರಂಗಪ್ಪ, ಕಸಬಾ ಸೊಸೈಟಿ ನಿರ್ದೇಶಕ ನಗರದ ರವಿ ಕಿರಣ್, ಡಿ.ಆರ್.ಗಿರೀಶ್, ಅಹಿಂದ ಮುಖಂಡರಾದ ನಗರದ ರವೀಂದ್ರ ಕಿಟ್ಟಿ, ಬನ್ನೂರು ಸುನಿಲ್ ಇದ್ದರು.
ಇದನ್ನೂ ಓದಿ » ಗೋಪಿ ಸರ್ಕಲ್ನಲ್ಲಿ ರಸ್ತೆ ಮೇಲೆ ಕುಳಿತು ಸಂಸದ ರಾಘವೇಂದ್ರ ಆಕ್ರೋಶ, ಸಿಎಂ ರಾಜೀನಾಮೆಗೆ ಪಟ್ಟು