ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIKARIPURA | 20 ನವೆಂಬರ್ 2019
ಶಿವಮೊಗ್ಗ ಶಿಕಾರಿಪುರ ರಾಣೇಬೆನ್ನೂರು ರೈಲ್ವೆ ಮಾರ್ಗ ಯೋಜನೆಯ ಭೂ ಸ್ವಾಧೀನಕ್ಕೆ ಸರ್ವೇ ಕಾರ್ಯ ಆರಂಭವಾಗಿದೆ. ಭೂಸ್ವಾಧೀನಾಧಿಕಾರಿ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ಇವತ್ತು ಸರ್ವೇ ಕಾರ್ಯ ಆರಂಭಿಸಿದ್ದಾರೆ.
ಯೋಜನೆಯ ಭೂಸ್ವಾಧೀನಾಧಿಕಾರಿ ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ವೇ ಕಾರ್ಯ ಆರಂಭವಾಗಿದೆ. ಇವತ್ತು ಯೋಜನೆ ವ್ಯಾಪ್ತಿಯ ವಿವಿಧೆಡೆ ಸರ್ವೇ ನಡೆಸಿದರು.
ಮಾರ್ಗ ಗುರುತಿಸಿದ ರೈಲ್ವೆ
ರೈಲ್ವೆ ಇಲಾಖೆಯು ಮಾರ್ಗವನ್ನು ಗುರುತಿಸಿದೆ. ಅಲ್ಲದೆ ರೈಲ್ವೆ ಅಧಿಕಾರಿಗಳು ಈಗಾಗಲೇ ಸರ್ವೆ ಕಾರ್ಯವನ್ನು ನಡೆಸಿದ್ದಾರೆ. ಅದರ ಪರಿಶೀಲನಾ ಕಾರ್ಯವನ್ನು ನಾವು ನಡೆಸುತ್ತಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಭೂ ಸ್ವಾಧೀನಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.
ನ್ಯಾಯಯುತವಾಗಿ ಪರಿಹಾರ ವಿತರಣೆ
ಭೂ ಸ್ವಾಧೀನ ಕಾಯ್ದೆ 2013ರ ಅನ್ವಯ ಭೂ ಸ್ವಾಧೀನ ಕಾರ್ಯ ನಡೆಯಲಿದೆ. ರೈತರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ವಿತರಣೆ ಮಾಡಲಾಗುತ್ತದೆ ಎಂದು ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಎರಡು ವರ್ಷದಲ್ಲಿ ಸ್ವಾಧೀನ ಪೂರ್ಣ
ಭೂ ಸ್ವಾಧೀನಕ್ಕೆ ಕಾಲಮಿತಿ ನಿಗದಿಪಡಿಸಲಾಗಿದೆ. ಎರಡು ವರ್ಷದಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಆ ಬಳಿಕ ರೈಲ್ವೆ ಇಲಾಖೆಯಿಂದ ಕಾಮಗಾರಿ ಆರಂಭವಾಗಿದೆ.
ರೈಲ್ವೆ ನಿಲ್ದಾಣದ ಜಾಗ ಫೈನಲ್
ರೈಲ್ವೆ ನಿಲ್ದಾಣಕ್ಕೆ ಈಗಾಗಲೆ ಜಾಗ ಗುರುತಿಸಲಾಗಿದೆ. ಚನ್ನಹಳ್ಳಿಯ ಮಹಾಲಿಂಗಪ್ಪ ಎಂಬುವವರ ತೋಟದ ಬಳಿ ನಿಲ್ದಾಣ ಸ್ಥಾಪಿಸಲು ಯೋಜಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422