ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 MARCH 2021
ಶಿಕಾರಿಪುರದ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅವರು ದೊಡ್ಡ ಸಂಖ್ಯೆಯ ಭಕ್ತರನ್ನು ಅಗಲಿದ್ದಾರೆ.
ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಭಕ್ತರು ಮಠದ ಬಳಿಗೆ ಆಗಮಿಸಿ ಕಂಬನಿ ಮಿಡಿಯುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಉಳ್ಳಿ ದರ್ಶನ್ ಸೇರಿದಂತೆ ಹಲವು ರಾಜಕೀಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಶಿಕಾರಿಪುರದ ನಡೆದಾಡುವ ದೇವರು
ಶ್ರೀ ಮ.ನಿ.ಪ್ರ. ರೇವಣಸಿದ್ದ ಸ್ವಾಮೀಜಿ ಅವರನ್ನು ಭಕ್ತರು ನಡೆದಾಡುದ ದೇವರು ಎಂದು ಪೂಜಿಸುತ್ತಿದ್ದರು.
ವೀರಶೈವ ಮಹಾಸಭಾದ ಸ್ಥಾಪಕರಲ್ಲಿ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು ಪ್ರಮುಖ ರೂವಾರಿಗಳು.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜನಸಿದ್ದ ಸ್ವಾಮೀಜಿ ಅವರು, ಬಾಲ್ಯದಲ್ಲೇ ಸನ್ಯಾಸತ್ವ ಸ್ವೀಕರಿಸಿದರು. ಧರ್ಮ ಪ್ರಚಾರಕ್ಕಾಗಿ ಮಲೆನಾಡು ಭಾಗಕ್ಕೆ ಆಗಮಿಸಿದರು.
ಭಕ್ತರ ಅಪೇಕ್ಷೆಯಂತೆ ಕುಮದ್ವತಿ ಮತ್ತು ವೃಷಭಾವತಿ ನದಿಗಳ ಸಂಗಮ ಸ್ಥಳದಲ್ಲಿ ಶಿವಯೋಗ ಮಂದಿರ ಸ್ಥಾಪಿಸಿದರು.
1977ರ ಫೆಬ್ರವರಿ 1ರಂದು ಪಟ್ಟಾಭಿಷೇಕ ವಹಿಸಿಕೊಂಡು ಸುಮಾರು 44 ವರ್ಷ ಮಠವನ್ನು ಮುನ್ನಡೆಸಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]