ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 FEBRUARY 2024
SHIMOGA : ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪ ಸಂಭವಿಸಿದ ಸ್ಪೋಟದ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಹಂದಿಗೆ ಇಡಲು ತಂದಿದ್ದ ಸಿಡಿ ಮದ್ದು ಸ್ಪೋಟಗೊಂಡಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್ ಮತ್ತು ರೂಪ ದಂಪತಿ ಬೆಡ್ ಶೀಟ್ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ ಇದ್ದ ಬ್ಯಾಗ್ ಅನ್ನು ಅಂಗಡಿಯಲ್ಲಿ ಇಟ್ಟು ಸಂತೆಗೆ ಹೋಗಿದ್ದರು. ಕೆಲವು ಹೊತ್ತಿನ ಬಳಿಕ ಬ್ಯಾಗಿನಲ್ಲಿದ್ದ ವಸ್ತು ಸ್ಪೋಟಗೊಂಡಿದೆ ಎಂದು ವಾಟ್ಸಪ್‌ನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಕಾಡು ಹಂದಿಗೆ ಇಡಲು ತಂದಿದ್ದ ಸಿಡಿಮದ್ದು ಸ್ಪೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿಗಳ ಕುರಿತು ಮಾಹಿತಿ ಲಭ್ಯವಾಗಿದ್ದು ಅವರ ವಿಚಾರಣೆ ಮಾಡಲಾಗುತ್ತದೆ. ಇನ್ನು ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422