ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 MARCH 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIKARIPURA : ಮೀಸಲಾತಿ ಕಡಿತ ಖಂಡಿಸಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯತ್ತ ಕಲ್ಲು ತೂರಾಟ (stone pelting) ಮಾಡಲಾಗಿದೆ. ಅಲ್ಲದೆ ಪಟ್ಟಣದಲ್ಲಿ ಅಳವಡಿಸಿದ್ದ ಬ್ಯಾನರ್‌ಗಳನ್ನು ಹರಿದು ಹಾಕಲಾಗಿದೆ.
ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಲ್ಲು ತೂರಾಟ (stone pelting), ಟೈರ್‌ಗೆ ಬೆಂಕಿ ಹಚ್ಚಲಾಗಿದೆ.
ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಬ್ಯಾನರ್‌ಗಳನ್ನು ಕಿತ್ತೊಗೆದರು
ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು. ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕೆಲವರು ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತೊಗೆದಿದ್ದಾರೆ. ಈ ವೇಳೆ ಟೈರ್, ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಮನೆಯತ್ತ ಕಲ್ಲು
ಇನ್ನು, ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯತ್ತ ಕಲ್ಲು ತೂರಾಟ ಮಾಡಲಾಗಿದೆ. ಕಿಟಕಿ ಗಾಜುಗಳು ಪುಡಿಯಾಗಿದೆ. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಶಿಕಾರಿಪುರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗ ಚುನಾವಣೆ, ಯಾವ್ಯಾವ ಕ್ಷೇತ್ರದಲ್ಲಿ ಈ ವಾರ ಹೇಗಿದೆ ಟ್ರೆಂಡ್? ಇಲ್ಲಿದೆ ಸಂಕ್ಷಿಪ್ತ ಮಾಹಿತಿ