NEWS HIGHLIGHTS
ಶಿಕಾರಿಪುರ: ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CET) ಕಡಿಮೆ ಅಂಕ ಬಂದಿದ್ದರಿಂದ ಮನನೊಂದು ಕೀಟನಾಶಕ ಸೇವಿಸಿದ್ದ ವಿದ್ಯಾರ್ಥಿಯೊಬ್ಬ ಆಸ್ಪತ್ರೆಯಲ್ಲಿ 20 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಶಿಕಾರಿಪುರ ಪಟ್ಟಣದ ವಿನಾಯಕನಗರದ ನಿವಾಸಿ, ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರ ದುರ್ಗಾವರ್ ಜಯಂತ್ (18) ಮೃತಪಟ್ಟ ವಿದ್ಯಾರ್ಥಿ. ಜೂನ್ 6ರಂದು ಸಿಇಟಿ ಫಲಿತಾಂಶ ಪ್ರಕಟವಾಗಿತ್ತು. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಪೋಷಕರು ಬುದ್ಧಿಮಾತು ಹೇಳಿದ್ದರು ಎನ್ನಲಾಗಿದೆ. ಇದರಿಂದ ಬೇಸರಗೊಂಡ ಜಯಂತ್, ಮರುದಿನವೇ ಮನೆಯಲ್ಲಿ ಕೀಟನಾಶಕ ಸೇವಿಸಿದ್ದನು.

ತಕ್ಷಣ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಪಟ್ಟಣದ ಕುರುಬ ಸಮಾಜದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿತು.