ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

 ಶಿವಮೊಗ್ಗ  LIVE 

ಶಿಕಾರಿಪುರ: ಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ (Teacher) ಧನಂಜಯಪ್ಪ (51) ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಘಟನೆ ನಡೆದಿದೆ.

ಇದನ್ನೂ ಓದಿ » ಶಿವಮೊಗ್ಗದ ಈ ರಸ್ತೆಯಲ್ಲಿ ಜಾರಿ ಬಿದ್ದ ಸಾಲು ಸಾಲು ಬೈಕುಗಳು, ಆಗಿದ್ದೇನು?

Sigandur-Janthre-2026-scaled.

ತರಗತಿಯ ಕೊಠಡಿಯಲ್ಲಿದ್ದ ಮಕ್ಕಳನ್ನು ಹೊರಗೆ ಕಳುಹಿಸಿದ್ದ ಧನಂಜಯಪ್ಪ ಅವರು ಬಾಗಿಲು ಹಾಕಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ಸ್ವಲ್ಪ ಸಮಯದ ನಂತರ ಶಾಲೆಯ ಶಿಕ್ಷಕರು ಇದನ್ನು ಗಮನಿಸಿ, ಧನಂಜಯಪ್ಪ ಅವರನ್ನು ಕೂಡಲೆ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮೂಲತಃ ಜೀನಹಳ್ಳಿಯವರಾದ ಇವರು ಹೊನ್ನಾಳಿಯಿಂದ ಬಳೂರು ಶಾಲೆಗೆ ಪ್ರತಿದಿನ ಓಡಾಡುತ್ತಿದ್ದರು. ಐದಾರು ವರ್ಷಗಳಿಂದ ಬಳೂರು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment