ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JANUARY 2024
SHIRALAKOPPA : ಐತಿಹಾಸಿಕ ಕ್ಷೇತ್ರ ತೊಗರ್ಸಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ದೇವಸ್ಥಾನದ ಬೆಳ್ಳಿ ಮಂಟಪದ ಕಳಶ, ಬೆಳ್ಳಿ ದೀಪ, ಲಿಂಗದ ಪಾಣಿಪೀಠಕ್ಕೆ ಹೊದಿಸಿದ್ದ ಬೆಳ್ಳಿ ಕವಚ, ವಿವಿಧ ಪೂಜಾ ಸಾಮಗ್ರಿಗಳು ಸೇರಿದಂತೆ ಅಂದಾಜು 15 ಕೆ.ಜಿ ತೂಕದ ಬೆಳ್ಳಿ ವಸ್ತುಗಳು ಕಳುವಾಗಿದೆ.
ಕರೆಂಟ್ ಕಟ್ ಮಾಡಿದ ಖದೀಮರು
ಕಳ್ಳರು ಮಧ್ಯರಾತ್ರಿ ತೇರು ಬೀದಿ ಮತ್ತು ದೇವಸ್ಥಾನದ ಸುತ್ತಲು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದೇಗುಲ ಪ್ರವೇಶಿಸಿದ್ದಾರೆ. ಸಾಕ್ಷಿ ಸಿಗಬಾರದೆಂದು ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಅಪಹರಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಂಗಳೂರಿನ ಬ್ಯಾಂಕ್ ಮ್ಯಾನೇಜರ್ ಅಡ್ಡಗಟ್ಟಿ ರಾಬರಿ
ವಿಷಯ ತಿಳಿದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಅವರು ದೇಗುಲಕ್ಕೆ ಭೇಟಿ ನೀಡಿದ್ದರು. ಸ್ವಾಮೀಜಿ ಅವರೊಂದಿಗೆ ಚರ್ಚೆ ನಡೆಸಿದರು. ಎಎಸ್‌ಪಿ ಎ.ಜೆ.ಕಾರ್ಯಪ್ಪ, ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸಿಪಿಐ ರುದ್ರೇಶ್, ಸಬ್ ಇನ್‌ಸ್ಪೆಪೆಕ್ಟರ್ ಮಂಜುನಾಥ್ ಕುರಿ ಭೇಟಿ ನೀಡಿ ಪರಿಶೀಲಿಸಿದರು. ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














