ಶಿಕಾರಿಪುರ : ಜಿಲ್ಲೆಯ ಶಿಕಾರಿಪುರ – ಸಾಗರ ಗಡಿ ಭಾಗದ ಬೈರಾಪುರ ಬಳಿಯ ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ 8 ರಿಂದ 10 ವರ್ಷದ ಗಂಡು ಹುಲಿ (Tiger) ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸಮಗ್ರ ತನಿಖೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.
ಹಿನ್ನೀರಿನಲ್ಲಿ ತೇಲುತಿತ್ತು ಹುಲಿ ದೇಹ
ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಸೋಮವಾರ ಮೀನು ಹಿಡಿಯಲು ಹೋದವರು ನೀರಿನಲ್ಲಿ ಹುಲಿ ತೇಲುತ್ತಿರುವುದನ್ನು ಗಮನಿಸಿದ್ದು, ಅಂಬ್ಲಿಗೊಳ ವಲಯ ಅರಣ್ಯಾಧಿಕಾರಿಗೆ ಮಾಹಿತಿ ನೀಡಿದ್ದಾರೆ.
‘ಹುಲಿಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಡೆದಿದೆ. ವಿಧಿ–ವಿಜ್ಞಾನ ಪ್ರಯೋಗಾಲಯದ ವರದಿಯ ನಂತರ ಹುಲಿಯ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ’
ಡಿ.ಮೋಹನ್ ಕುಮಾರ್, ಸಾಗರ ವನ್ಯಜೀವಿ ವಿಭಾಗದ ಡಿಸಿಎಫ್
ಶಿವಮೊಗ್ಗದ ಹುಲಿ ಮತ್ತು ಸಿಂಹಧಾಮದ ಡಾ. ಮುರಳಿ ಮನೋಹರ್ ಮರಣೋತ್ತರ ಪರೀಕ್ಷೆ ನಡೆಸಿದರು. ಮರಣೋತ್ತರ ಪರೀಕ್ಷೆಯ ನಂತರ ಜಲಾಶಯ ಸಮೀಪದ ಡ್ಯಾಂ ಹೊಸೂರಿನಲ್ಲಿ ಮೃತ ಹುಲಿಯ ಅಂತ್ಯಕ್ರಿಯೆ ನೆರವೇರಿಸಲಾಯಿತು.
ತನಿಖೆಗೆ ಆದೇಶಿಸಿ ಮಿನಿಸ್ಟರ್ ಗಡುವು
ಹುಲಿ ಸಾವಿನ ಕುರಿತು ಮಾಧ್ಯಮಗಳ ವರದಿ ಮತ್ತು ಗುಂಡು ಹಾರಿಸಿ ಕೊಂದಿರುವ ಅನುಮಾನವಿದೆ. ಈ ಹಿನ್ನೆಲೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಸಿದ್ದಾರೆ. 10 ದಿನದೊಳಗೆ ವರದಿ ನೀಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚಿಸಿದ್ದಾರೆ.
ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು. ಗುಂಡು ಹೊಡೆದ ಗಾಯ ಇರುವುದಾಗಿ ಮಾಧ್ಯಮಗಳಲ್ಲಿ ಸಚಿತ್ರ ವರದಿ ಪ್ರಕಟವಾಗಿದೆ. ಈ ಪ್ರದೇಶದಲ್ಲಿ ಯಾವತ್ತೂ ಹುಲಿಯ ದರ್ಶನ ಆಗಿಲ್ಲ. ಹೀಗಾಗಿ ಬೇರೆ ಕಡೆ ಹುಲಿ ಕೊಂದು ಇಲ್ಲಿ ಹಾಕಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಈ ಕುರಿತು ತನಿಖೆಯಾಗಬೇಕು ಎಂದು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಿಂದ ಕಾರ್ಮಿಕ ಮಹಿಳೆಯರನ್ನು ವಿಮಾನದಲ್ಲಿ ಗೋವಾಗೆ ಕರೆದೊಯ್ದ ಅಡಿಕೆ ತೋಟದ ಮಾಲೀಕ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200