ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿಕಾರಿಪುರ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭ 50,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ (Gherao) ಹಾಕಲಾಗುವುದು. ಆ ಮೂಲಕ ರೈತ (Farmers) ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಶಿಕಾರಿಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ (Protest) ಪಾಲ್ಗೊಂಡಿದ್ದ ಬಿ.ವೈ.ವಿಜಯೇಂದ್ರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತಿನಗಾಡಿಯಲ್ಲಿ ಪಾಲ್ಗೊಂಡು ಗಮನಸೆಳೆದರು.

ವಿಜಯೇಂದ್ರ ಏನೇನು ಹೇಳಿದರು?

ಪಾಯಿಂಟ್‌ 1: ರೈತರ ಹಿತಕಾಯುವುದಾಗಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು ರೈತರೇ ಬುಡಸಮೇತ ಕಿತ್ತೆಸೆಯಲಿದ್ದು, 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಃಸಿದ್ಧ. ಕಾಂಗ್ರೆಸ್ ಆಂತರಿಕ ಕಚ್ಚಾಟ ಜೋರಾಗಿದ್ದು, ವಾರಕ್ಕೆ ನಾಲ್ಕು ದಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ದೆಹಲಿಗೆ ಹೋಗುತ್ತಿದ್ದಾರೆ. ಸಚಿವರು, ಶಾಸಕರು ದೆಹಲಿ ಪೆರೇಡ್ ನಡೆಸಿದ್ದು, ಸರ್ಕಾರ ದುರ್ಬಲಗೊಂಡು ಅಭಿವೃದ್ಧಿ ಶೂನ್ಯವಾಗಿದೆ. ಇಂಥ ಪಕ್ಷಕ್ಕೆ ಜನರೇ ತಕ್ಕಪಾಠ ಕಲಿಸಬೇಕು.

BY-Vijayendra-Protest-in-Shikaripura

ಪಾಯಿಂಟ್‌ 2: ಬಿ.ಎಸ್‌. ಯಡಿಯೂರಪ್ಪ ಅವರು ಸಿ.ಎಂ. ಆಗಿದ್ದಾಗ ಅತಿವೃಷ್ಟಿ ಸಂದರ್ಭದಲ್ಲಿ ತೊಂದರೆಗೆ ಒಳಗಾದ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಿದ್ದರು. ಮನೆ ಹಾಳಾದವರಿಗೆ ₹ 5 ಲಕ್ಷ ಪರಿಹಾರ ಕಲ್ಪಿಸಿದ್ದರು. ಈಗಿನ ಸರ್ಕಾರ ಕೇವಲ ₹80,000 ನೀಡುತ್ತಿದೆ. ಪರಿಶಿಷ್ಟ ಜಾತಿ ಜನರಿಗೆ ಮೀಸಲಾದ ಹಣ ದುರ್ಬಳಕೆ ಮಾಡುತ್ತಿದೆ. ಅಭಿವೃದ್ಧಿಗೆ ಹಣ ನೀಡುತ್ತಿಲ್ಲ, ರೈತರ ಹಿತಕಾಯಬೇಕಿರುವ ಸಚಿವರೂ ನಿಷ್ಕ್ರಿಯರಾಗಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ನಿಂಬೆಗೊಂದಿ ಸಿದ್ಲಿಂಗಪ್ಪ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸಂಕ್ಲಾಪುರದ ಹನುಮಂತಪ್ಪ, ಮುಖಂಡರಾದ ಕೊಳಗಿ ರೇವಣಪ್ಪ, ಸಣ್ಣ ಹನುಮಂತಪ್ಪ, ರೈತ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಯೋಗೇಶಪ್ಪ, ಮಹೇಶ್ ಹುಲ್ಮಾರ್, ಚನ್ನವೀರಪ್ಪ, ಜಗದೀಶ್, ಶೇಖರಪ್ಪ, ಗಾಯತ್ರಿದೇವಿ ಮಲ್ಲಪ್ಪ, ನಿವೇದಿತಾ ರಾಜು, ಸುನಂದಾ ಮಂಜುನಾಥ್, ಶಶಿ ಚುರ್ಚಿಗುಂಡಿ, ಗಿರೀಶ್ ಧಾರವಾಡ, ಇಂದೂಧರ್ ಇತರರು ಇದ್ದರು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment