ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 MARCH 2023
SHIKARIPURA : VISL ಕಾರ್ಖಾನೆಯನ್ನು (Factory) ಯಾವುದೆ ಕಾರಣಕ್ಕು ಮುಚ್ಚಲು ಬಿಡುವುದಿಲ್ಲ. ಕಾರ್ಖಾನೆ ಮುಚ್ಚದಿರುವ ಕುರಿತು ಕೇಂದ್ರದ ನಾಯಕರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಶಿಕಾರಿಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ವಿಐಎಸ್ಎಲ್ ಕಾರ್ಖಾನೆಯನ್ನು (Factory) ಮುಚ್ಚಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈಗಾಗಲೆ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗುತ್ತಿದೆ. ಕಾರ್ಖಾನೆಯಲ್ಲಿರುವ ಉಪಕರಣಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಹವಣಿಸಲಾಗುತ್ತಿದೆ ಎಂದು ಕಾರ್ಮಿಕರು ಆಪಾದಿಸಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚದಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಬಳಿ ಚರ್ಚೆ ನಡೆಸಲಾಗಿದೆ. ಯಾವುದೆ ಕಾರಣಕ್ಕೂ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಭರವಸೆ ನೀಡಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ರಾಜ್ಯದಲ್ಲಿ ಎರಡನೇ ಬಹುಮಾನ, ಭದ್ರಾವತಿ, ಸೊರಬ, ಸಾಗರಕ್ಕೂ ಸಿಕ್ಕಿದೆ ಪ್ರಶಸ್ತಿ
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ರಾಕೇಶ್, ವಿನಯ್ ಕುಮಾರ್, ಆರ್.ಅರುಣ್, ನಂಜೇಗೌಡ, ಸತೀಶ್, ಶಿವನಾಗು, ಐಸಾಕ್ ಮತ್ತಿತರರು ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422