ಶಿಕಾರಿಪುರದ ರೈತರಿಗೆ ಗುಡ್ ನ್ಯೂಸ್, ಜಾಕ್ ವೆಲ್​​ನಿಂದ ಪ್ರಯೋಗಿಕವಾಗಿ ನೀರು ಹರಿಸುವ ಕಾರ್ಯ ಯಶಸ್ವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 7 ಜುಲೈ 2021

ತುಂಗಭದ್ರಾ ನದಿ ಸಮೀಪ ನಿರ್ಮಿಸಿರುವ ಜಾಕ್‍ವೆಲ್‍ನಿಂದ ಪ್ರಯೋಗಿಕವಾಗಿ ನೀರು ಹರಿಸುವ ಕಾರ್ಯ ಯಶಸ್ವಿಯಾಗಿದೆ. ಇದು ಶಿಕಾರಿಪುರ ತಾಲೂಕಿನ ರೈತರಲ್ಲಿ ಮಂದಹಾಸ ಮೂಡಿಸಿದೆ.

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕು ಚಟ್ನಳ್ಳಿ ಬಳಿ ಜಾಕ್‍ವೆಲ್‍ ನಿರ್ಮಿಸಲಾಗಿದೆ. ಇದರಿಂದ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ನಡೆಯಿತು. ನದಿ ನೀರನ್ನು ಎತ್ತಿ ಪೈಪ್‍ ಲೈನ್ ಮೂಲಕ ಹರಿಸಲಾಯಿತು. ಮೇದೂರು ಗ್ರಾಮದ ಹಳ್ಳಕ್ಕೆ ಪೈಪ್‍ಲೈನ್‍ ಮೂಲಕ ನೀರು ಹರಿಸಲಾಯಿತು.

ಪ್ರಯೋಗಿಕವಾಗಿ ನೀರು ಹರಿಸುವ ಕಾರ್ಯ ಯಶಸ್ವಿಯಾಗಿದ್ದು, ಪೈಪ್‍ಗಳನ್ನು ಅಳವಡಿಸುವ ಕಾರ್ಯ ಬಾಕಿ ಇದೆ. ಈ ಪೈಪ್‍ಗಳ ಮೂಲಕವೆ ಕೆರಗಳಿಗೆ ನೀರು ಹರಿದು ಬರಲಿದೆ.

ಶಿಕಾರಿಪುರ ತಾಲೂಕಿನ ಉಡುಗಣಿ, ತಾಳಗುಂದ, ಹೊಸೂರು ಹೋಬಳಿಯ ಕೆರೆಗಳನ್ನು ತುಂಬಿಸುವ ಯೋಜನೆ ಇದೆ. ತಾಲೂಕಿನ 249 ಕೆರೆಗಳಿಗೆ ನೀರು ಹರಿಯಲಿದೆ. ಇನ್ನು ಹಾವೇರಿ ಜಿಲ್ಲೆಯ ಹಿರೇಕೆರೂರಿನ 6 ಕೆರೆಗಳಿಗೂ ಈ ಯೋಜನೆಯಿಂದ ನೀರು ಹರಿಸಲಾಗುತ್ತದೆ.

203044815 1148179448995297 4099900154580379732 n.jpg? nc cat=100&ccb=1 3& nc sid=730e14& nc ohc=EB7AAr6Q0TkAX9CDOlV&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment