ಶಿಕಾರಿಪುರ: ರಾಜ್ಯದ ಉದ್ದಗಲಕ್ಕೂ ಓಡಾಟ ಮಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಏಕೈಕ ಗುರಿಯೊಂದಿಗೆ ಮುನ್ನಡೆಯುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yediyurappa) ಹೇಳಿದರು.
ಕುಮದ್ವತಿ ಕಾಲೇಜು ಆವರಣದ ಏಕಲವ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಯಡಿಯೂರಪ್ಪ ಅವರ 84ನೇ ಜನ್ಮದಿನದ ಸಂಭ್ರಮಾಚರಣೆಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಮಾತು ಸಾಧನೆಯಾಗಬಾರದು. ಬದಲಿಗೆ ಸಾಧನೆಯೇ ಮಾತು ಆಗಬೇಕು ಎಂಬ ಮಂತ್ರದಲ್ಲಿ ನಂಬಿಕೆ ಇಟ್ಟವನು ನಾನು. ಅದಕ್ಕೆ ಶ್ರಮವಹಿಸಿ ಕೆಲಸ ಮಾಡುವುದು ಅಗತ್ಯ. ಶೋಷಿತರ, ದಮನಿತರ ಏಳಿಗೆಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ. ರೈತರು ಸ್ವಾವಲಂಬಿ ಆಗಲು ರಾಜ್ಯದ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.
ಶಿಕಾರಿಪುರ, ಶಿವಮೊಗ್ಗದ ರೀತಿ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಹಾಗೂ ಈ ಭ್ರಷ್ಟ ವ್ಯವಸ್ಥೆ ಕಿತ್ತೊಗೆದು ನಾಡಿನ ಜನರು ನೆಮ್ಮದಿಯ ಬದುಕು ಕಟ್ಟಿಕೊಡಲು ಟೊಂಕ ಕಟ್ಟುವೆ ಎಂದು ಹೇಳಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಅಧಿಕಾರದ ಹೆಬ್ಬಾಗಿಲು ತೆಗೆದವರು ಬಿ.ಎಸ್.ಯಡಿಯೂರಪ್ಪ. ನಮ್ಮೆಲ್ಲಾ ಕಾರ್ಯಕರ್ತರಿಗೆ ಇದೊಂದು ಸ್ಫೂರ್ತಿಯ ದಿನ. ಯಡಿಯೂರಪ್ಪ ಅವರ ಬದುಕಿನ ಪ್ರತಿ ಹೆಜ್ಜೆಯೂ ಪಕ್ಷ ಕಟ್ಟಲು ಸೀಮಿತವಾಗಿವೆ. ಪ್ರಹ್ಲಾದ ಜೋಶಿ, ಕೇಂದ್ರ ಸಚಿವ
ತಂದೆಯ ಸಂಕಲ್ಪ ಶಕ್ತಿ ಅದ್ಭುತವಾದುದು. ಎಂಟು ಬಾರಿ ಶಾಸಕ, ಸಂಸದರಾಗಿ ವಿಪಕ್ಷ ನಾಯಕರಾಗಿ, ನಾಲ್ಕು ಬಾರಿ ಸಿಎಂ ಆಗಿ ಮಾಡಿದ್ದು ಶಿಕಾರಿಪುರದ ಮಹಾಜನತೆ. ಸಂಘ ಪರಿವಾರದ ಹಿರಿಯರ ಆಶಯದಂತೆ ಪಕ್ಷವನ್ನು ಕಟ್ಟಿ ಬೆಳೆಸಿದರು. ಎಲ್ಲ ಸಮಾಜಗಳಿಗೆ ನ್ಯಾಯ ಕೊಡಿಸುವ ಕೆಲಸವನ್ನು ಮಾಡಿದರು. ಬಿ.ವೈ.ವಿಜಯೇಂದ್ರ, ಶಿಕಾರಿಪುರ ಶಾಸಕ
ಶಿಕಾರಿಪುರ ತಾಲೂಕನ್ನು ಶೂನ್ಯದಿಂದ ಅಭಿವೃದ್ಧಿಯೆಡೆಗೆ ಕೊಂಡೊಯ್ದ ನಾಯಕರು ಯಡಿಯೂರಪ್ಪ. ಇಂದು ಅವರ ಅಭಿಮಾನಿಗಳು ಹಬ್ಬದ ರೀತಿ ಆಚರಿಸುತ್ತಿದ್ದಾರೆ. ನಮ್ಮ ಪಾಲಿಗೆ ಇದೊಂದು ಸುದಿನ ಮತ್ತು ಯಡಿಯೂರಪ್ಪ ಅವರ ಮತ್ತು ನಮ್ಮೆಲ್ಲರ ಸುಕೃತ. ಜನತೆಯ ಅಭಿಮಾನದ ಮೌಲ್ಯಕ್ಕೆ ಯಾವುದೂ ಸರಿಸಮ ಅಲ್ಲ.ಬಿ.ವೈ.ರಾಘವೇಂದ್ರ, ಸಂಸದ
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ