ಆಗ ಹಿರಿ ಮಗನಿಗೆ ಕ್ಷೇತ್ರ ಬಿಟ್ಟಿದ್ದರು, ಈಗ ಕಿರಿ ಮಗನನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIKARIPURA | 22 ಜುಲೈ 2022

ಶಿಕಾರಿಪುರ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ (VIJAYENDRA) ಅವರು ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಹಲವರ ಹುಬ್ಬೇರುವಂತೆ ಮಾಡಿದೆ. ಚರ್ಚೆ ಹುಟ್ಟುಹಾಕಿದೆ. ಆದರೆ ಯಡಿಯೂರಪ್ಪ (YEDIYURAPPA) ಅವರು ಪುತ್ರನಿಗಾಗಿ ಕ್ಷೇತ್ರ ಬಿಟ್ಟುಕೊಡುತ್ತಿರುವುದು ಇದೆ ಮೊದಲಲ್ಲ.

Shimoga Nanjappa Hospital

ಯಡಿಯೂರಪ್ಪ ಅವರು 1983ರಲ್ಲಿ ಮೊದಲ ಭಾರಿ ಶಿಕಾರಿಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಆ ನಂತರ ಎಂಟು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1999ರಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎನ್.ಮಹಾಲಿಂಗಪ್ಪ ಅವರ ಎದುರ ಸೋಲನಪ್ಪಿದ್ದರು. ಆದಾದ ನಂತರ ಪುನಃ ಯಡಿಯೂರಪ್ಪ ಅವರು ವಿಜಯ ಯಾತ್ರೆ ಮುಂದುವರೆಯುತ್ತಲೆ ಬಂದಿತ್ತು.

ಹಿರಿಯ ಮಗನಿಗೆ ಬಿಟ್ಟು ಕೊಟ್ಟಿದ್ದರು

ಶಿಕಾರಿಪುರ ಕ್ಷೇತ್ರದಲ್ಲಿ ನಿರಂತರ ವಿಜಯ ಸಾಧಿಸುತ್ತಿರುವ ಯಡಿಯೂರಪ್ಪ (YEDIYURAPPA) ಅವರು ಒಮ್ಮೆ ಮಾತ್ರ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟಿದ್ದರು. 2014ರಲ್ಲಿ ಯಡಿಯೂರಪ್ಪ ಅವರು ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದರು. 3.63 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆ ಯಡಿಯೂರಪ್ಪ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2014ರಲ್ಲಿ ಶಿಕಾರಿಪುರ ವಿಧಾನಸಭೆಗೆ ಉಪ ಚುನಾವಣೆ ನಡೆಯಿತು. ಆಗ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ ಪಕ್ಷದ ಶಾಂತವೀರಪ್ಪ ಗೌಡ ಅವರನ್ನು ಸೋಲಿಸಿ ರಾಘವೇಂದ್ರ ಗೆಲುವು ಸಾಧಿಸಿದ್ದರು.

ಈಗ ಕಿರಿ ಮಗನಿಗೆ ಕ್ಷೇತ್ರ

ಈಗ ವಯಸ್ಸಿನ ಕಾರಣಕ್ಕೆ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದ್ದಾರೆ. ಹಾಗಾಗಿ ತಾವು ಎಂಟು ಭಾರಿ ಗೆಲುವು ಸಾಧಿಸಿದ್ದ ಶಿಕಾರಿಪುರ ಕ್ಷೇತ್ರವನ್ನು ಮತ್ತೊಬ್ಬ ಪುತ್ರನಿಗೆ ಬಿಟ್ಟುಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.

ಇದನ್ನೂ ಓದಿ – ದೊಡ್ಡ ಕುತೂಹಲಕ್ಕೆ 12 ಸೆಕಂಡ್’ನಲ್ಲಿ ತೆರೆ ಎಳೆದ ಯಡಿಯೂರಪ್ಪ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment