ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIKARIPURA | 22 ಜುಲೈ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮುಂದಿನ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (YEDIYURAPPA) ಅವರು ಸ್ಪರ್ಧೆ ಮಾಡುತ್ತಿಲ್ಲ. ಪುತ್ರ ವಿಜಯೇಂದ್ರ (VIJAYENDRA) ಅವರು ಶಿಕಾರಿಪುರ (SHIKARIPURA) ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಈ ಕುರಿತು ಯಡಿಯೂರಪ್ಪ ಅವರೆ ಹೇಳಿಕೆ ನೀಡಿದ್ದಾರೆ.
ತೀವ್ರ ಕುತೂಹಲಕ್ಕೆ ಮೂಡಿಸಿದ್ದ ಬೆಳವಣಿಗೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರದಲ್ಲಿ ಯಡಿಯೂರಪ್ಪ ತೆರೆ ಎಳೆದಿದ್ದಾರೆ. 12 ಸೆಕೆಂಡ್’ನ ಅವರ ಹೇಳಿಕೆ ಜಿಲ್ಲೆ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯ ರಾಜಕಾರಣದಲ್ಲೂ ಕುತೂಹಲ ಹುಟ್ಟುಹಾಕಿದೆ. ಚರ್ಚೆಗೂ ಕಾರಣವಾಗಿದೆ.
ಹಿನ್ನಲೆಗೆ ಸರಿಯುತ್ತಾರಾ ಯಡಿಯೂರಪ್ಪ?
ಯಡಿಯೂರಪ್ಪ (YEDIYURAPPA) ಅವರು ಎಂಟು ಭಾರಿ ಶಿಕಾರಪುರ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಇಲ್ಲಿಂದ ಗೆದ್ದು ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಪ್ರಭಾವ ವೃದ್ಧಿಸಿಕೊಂಡಿದ್ದಾರೆ. ಅಧಿಕಾರ ಇದ್ದಾಗ, ಅವಕಾಶ ಸಿಕ್ಕಾಗಲೆಲ್ಲ ಕ್ಷೇತ್ರಕ್ಕೆ ಹೇರಳವಾಗಿ ಅನುದಾನ ತಂದಿದ್ದಾರೆ. ಮೂಲ ಸೌಕರ್ಯಗಳು, ನೀರಾವರಿ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಮುಂದಿನ ಅವಧಿಗು ಯಡಿಯೂರಪ್ಪ ಅವರೆ ಸ್ಪರ್ಧೆ ಮಾಡಬೇಕು ಎಂಬುದು ಕ್ಷೇತ್ರದಲ್ಲಿನ ಅವರ ಬೆಂಬಲಿಗರು, ಪಕ್ಷದ ಕಾರ್ಯಕರ್ತರ ಅಭಿಮತವಾಗಿತ್ತು.
ವಯಸ್ಸಿನ ಕಾರಣಕ್ಕೆ ಹಿಂದೆ ಸರಿದರು
75 ವರ್ಷ ಪೂರೈಸಿದವರಿಗೆ ಟಿಕೆಟ್ ನೀಡುವುದಿಲ್ಲ ಎಂಬುದು ಬಿಜೆಪಿಯೊಳಗಿನ ಅಘೋಷಿತ ನಿಯಮ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಹಿರಿಯ ನಾಯರಿಗೆ ಕೊಕ್ ಕೊಡಲಾಯಿತು. ಇತ್ತ ವಯಸ್ಸಿನ ಕಾರಣಕ್ಕಾಗಿಯೇ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ತೊರೆಯಬೇಕಾಯಿತು. ಈಗ ಇದೆ ವಯೋಮಿತಿಯಿಂದಾಗಿ ಶಿಕಾರಿಪುರ ಕ್ಷೇತ್ರವನ್ನು ಯಡಿಯೂರಪ್ಪ ಅವರು ಬಿಟ್ಟುಕೊಡಬೇಕಾಗಿದೆ.
ಕುತೂಹಲಕ್ಕೆ ತೆರೆ ಎಳೆದ ಹೇಳಿಕೆ
ಯಡಿಯೂರಪ್ಪ ಅವರ ನಂತರ ಯಾರು ಎಂಬ ಕುತೂಹಲ ಶಿಕಾರಿಪುರ ಕ್ಷೇತ್ರದಲ್ಲಿ ಚರ್ಚೆಗೆ ಕಾರಣವಾಗಿತ್ತು. ಹಲವು ಹೆಸರುಗಳು ಕೂಡ ಚಾಲ್ತಿಗೆ ಬಂದಿದ್ದವು. ಪುತ್ರಿ ಬಿ.ವೈ.ಅರುಣಾದೇವಿ, ಸಂಸದ ರಾಘವೇಂದ್ರ, ಬಿ.ವೈ.ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ, ಬಿ.ವೈ.ವಿಜಯೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಯಡಿಯೂರಪ್ಪ ಅವರ ಕುಟುಂಬದವರು, ಆಪ್ತ ಬಳಗದವರ ಹೆಸರುಗಳು ಚಾಲ್ತಿಗೆ ಬಂದಿದ್ದವು. ಈಗೆ ಎಲ್ಲಾ ಕುತೂಹಲ ಮತ್ತು ಚರ್ಚೆಗೂ ಯಡಿಯೂರಪ್ಪ ಅವರು ತೆರೆ ಎಳೆದಿದ್ದಾರೆ.
‘ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಮುಂದಿನ ಚುನಾವಣೆಗೆ ತಾವು ಸ್ಪರ್ಧೆ ಮಾಡುವುದಿಲ್ಲ. ಬಿ.ವೈ.ವಿಜಯೇಂದ್ರ ಅವರು ಸ್ಪರ್ಧಿಸಲಿದ್ದಾರೆ. ಶಿಕಾರಿಪುರ ಕ್ಷೇತ್ರದ ಜನರು ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕು’ ಎಂದು ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ.
ಜಿಲ್ಲೆ ರಾಜಕಾರಣಕ್ಕೆ ಪಾದಾರ್ಪಣೆ
ಬಿ.ವೈ.ವಿಜಯೇಂದ್ರ ಬಿಜೆಪಿಯಲ್ಲಿ ಸಂಘಟನಾ ಕಾರ್ಯದಲ್ಲಿ ತೊಡಿಗಿಸಿಕೊಂಡಿದ್ದರು. ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಓಡಾಡುತ್ತಿದ್ದರು. ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದರು. ಹಳೆ ಮೈಸೂರು ಭಾಗದಲ್ಲೇ ಅವರು ಅಖಾಡಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಇನ್ನು, ಪಕ್ಷದಲ್ಲಿ ಪ್ರಭಾವಿ ಅನಿಸಿಕೊಂಡರೂ ಶಿವಮೊಗ್ಗ ಜಿಲ್ಲೆಯ ರಾಜಕಾರಣದತ್ತ ಹೆಚ್ಚು ಗಮನ ಹರಿಸಿರಲಿಲ್ಲ. ಜಿಲ್ಲೆ ರಾಜಕಾರಣದ ಕುರಿತು ಬಹಿರಂಗವಾಗಿ ಎಂದಿಗೂ ಚರ್ಚೆ ಮಾಡುತ್ತಿರಲಿಲ್ಲ. ಯಡಿಯೂರಪ್ಪ ಅವರ ಘೋಷಣೆ ಬೆನ್ನಿಗೆ ವಿಜಯೇಂದ್ರ ಅವರು ವಿದ್ಯುಕ್ತವಾಗಿ ಜಿಲ್ಲಾ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದಂತಾಗಿದೆ.
ಇದನ್ನೂ ಓದಿ – ಪುತ್ರನಿಗಾಗಿ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಯಡಿಯೂರಪ್ಪ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.