ಶಿವಮೊಗ್ಗ ಲೈವ್.ಕಾಂ | 06 ಏಪ್ರಿಲ್ 2019
ಲೋಕಸಭೆ ಚುನಾವಣೆ ಬಳಿಕ ಯಡಿಯೂರಪ್ಪ ಮೂಲೆಗುಂಪಾಗುತ್ತಾರೆ ಅಂತಾ ಜೆಡಿಎಸ್, ಕಾಂಗ್ರೆಸ್ ನಾಯಕರ ಹೇಳಿಕೆಗೆ, ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಶಿಕಾರಿಪುರದಲ್ಲಿ ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ಯಡಿಯೂರಪ್ಪ, ಪಕ್ಷ ಬದಲಾವಣೆ ಬಯಸಿದರೆ ಸ್ವಾಗತಿಸುತ್ತೇನೆ ಎಂದರು.
![]() |
ಬದಲಾವಣೆ ಬಯಸಿದರೆ ಸ್ವಾಗತ
ಚುನಾವಣೆ ಬಳಿಕ, ಒಂದು ವೇಳೆ ಪಕ್ಷದ ಬದಲಾವಣೆ ಬಯಸಿದರೆ ತಾವು ಅದನ್ನು ಸ್ವಾಗತಿಸುವುದಾಗಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಾನೀಗ ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡುತ್ತಿದ್ದೇನೆ. ಇನ್ನೂ ನಾಲ್ಕು ವರ್ಷ ಅಧಿಕಾರವಧಿ ಇದೆ. ಅದನ್ನು ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ ಅಂತಾ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.
ಕರ್ತವ್ಯ ಮರೆತಿರುವ ಸಿಎಂ
ಇನ್ನು, ಎರಡು ವರ್ಷ ಮೊದಲೇ ಪುಲ್ವಾಮ ದಾಳಿಯ ಕುರಿತು ಮಾಹಿತಿ ಇತ್ತು ಅಂತಾ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೂ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ದೇಶದ್ರೋಹಿ ಚಟುವಟಿಕೆ ಕುರಿತು ಮಾಹಿತಿ ಇದ್ದರೂ, ಕೇಂದ್ರ ಸರ್ಕಾರದ ಗಮನಕ್ಕೆ ತರದೆ ಇದ್ದಿದ್ದು, ಅಕ್ಷ್ಯಮ ಅಪರಾಧ ಎಂದಿದ್ದಾರೆ.
ಐಟಿ, ಐಟಿ ಅಂತಾ ಬೊಬ್ಬೆಯಿಡುತ್ತಿದ್ದಾರೆ
ಒಂದು ವಾರದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಐಟಿ ಅಧಿಕಾರಿಗಳ ವಿರುದ್ಧ ಬೊಬ್ಬೆ ಹೊಡೆಯುತ್ತಿದ್ದಾರೆ. ಐಟಿ ದಾಳಿ ರಾಜಕೀಯ ದುರುದ್ದೇಶ ಎಂದು ಪದೇ ಪದೇ ಹೇಳುತ್ತಿದ್ದಾರೆ. ಈಗ ಅವರ ಸಂಬಂಧಿಗಳ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿದೆ. ತಪ್ಪಿತಸ್ಥರ ಪರವಾಗಿ ಮಾತನಾಡುವುದು ಮುಖ್ಯಮಂತ್ರಿ ಅವರಿಗೆ ಶೋಭೆ ತರುವುದಿಲ್ಲ ಎಂದರು.
ಇನ್ನು, ಬೆಳಗ್ಗೆಯಿಂದ ಮನೆಗೆ ಭೇಟಿ ನೀಡುತ್ತಿರುವ ಮುಖಂಡರು, ಕಾರ್ಯಕರ್ತರಿಗೆ ಯಡಿಯೂರಪ್ಪ ಬೇವು, ಬೆಲ್ಲ ವಿತರಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200