ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿರಾಳಕೊಪ್ಪದ ಯುವಕನಿಗೆ ಶಿವಮೊಗ್ಗದ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾವಾಸ (Prison Sentence) ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಶಿರಾಳಕೊಪ್ಪ ನಿವಾಸಿಯಾದ 23 ವರ್ಷದ ಯುವಕನು, 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಪರಿಚಯ ಬೆಳೆಸಿಕೊಂಡಿದ್ದನು. ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆ ಹಾಗೂ ಎಸ್.ಸಿ ಮತ್ತು ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಶಿಕಾರಿಪುರದ ಅಂದಿನ ಡಿವೈಎಸ್ಪಿ ಕೇಶವ.ಕೆ.ವಿ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ (ಎಫ್.ಟಿ.ಎಸ್.ಸಿ-1) ವಿಚಾರಣೆ ನಡೆದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶರಾದ ನಿಂಗನಗೌಡ ಭ.ಪಾಟೀಲ್ ಅವರು ತೀರ್ಪು ಪ್ರಕಟಿಸಿದ್ದಾರೆ.
ಇದನ್ನೂ ಓದಿ – ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?
ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ. ₹1,00,000 ದಂಡ ವಿಧಿಸಿದ್ದಾರೆ. ದಿವಂಗತ ನೊಂದ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ ₹4,00,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

LATEST NEWS
- ಕಾರ್ಗಲ್ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

- ಭದ್ರಾವತಿಯ ಒಂದೇ ಕುಟುಂಬದ ಐದು ಜನರಿಗೆ 2 ವರ್ಷ ಜೈಲು ಶಿಕ್ಷೆ, ₹1,90,000 ದಂಡ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ, ಕಂಬಕ್ಕೆ ಬೆಕ್ಕಿನ ಮೃತದೇಹ ಕಟ್ಟಿದ ಕಿಡಿಗೇಡಿಗಳು

- ಶಿರಾಳಕೊಪ್ಪದ 23 ವರ್ಷದ ಯುವಕನಿಗೆ 20 ವರ್ಷ ಜೈಲು, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್

- ಚಿನ್ನಾಭರಣ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚು ಹುದ್ದೆಗಳಿಗೆ ನೇರ ಸಂದರ್ಶನ, ಯಾವಾಗ? ಎಷ್ಟಿರಲಿದೆ ಸಂಬಳ?

About The Editor
ನಿತಿನ್ ಆರ್.ಕೈದೊಟ್ಲು





