ಶಿವಮೊಗ್ಗದ ಹಾರನಹಳ್ಳಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಗುಂಪು ಸೇರುವಂತಿಲ್ಲ, ಸಭೆ, ಸಮಾರಂಭ ಮಾಡುವಂತಿಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021

ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಶಿವಮೊಗ್ಗ ತಾಲೂಕು ಹಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಜೂನ್ 2ರ ಬೆಳಗ್ಗೆ 6 ಗಂಟೆಯಿಂದ ಜೂನ್ 6ರ ರಾತ್ರಿ 12 ಗಂಟೆವರೆಗೆ ಸಿಆರ್‍ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಹಶೀಲ್ದಾರ್ ಆದೇಶಿಸಿದ್ದಾರೆ.

ಹಾರನಹಳ್ಳಿ ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಾಗಿದೆ. ಅದರ ಆಧಾರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಅವಧಿಯಲ್ಲಿ ಮೂರು ಜನಕ್ಕಿಂತಲೂ ಹೆಚ್ಚು ಜನ ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ. ಈಗಾಗಲೆ ನಿಗದಿಯಾಗಿರುವ ಮದುವೆ, ಖಾಸಗಿ ಕಾರ್ಯಕ್ರಮಗಳಿಗೆ ಪ್ರಾಧಿಕಾರದ ಅನುಮತಿ ಕಡ್ಡಾಯ. ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲು ಕೇಂದ್ರಗಳು ಮಾತ್ರ ತೆಗೆಯಲು ಅನುಮತಿ ನೀಡಲಾಗಿದೆ ಎಂದು ತಹಶೀಲ್ದಾರ್ ಎನ್‍.ಜೆ.ನಾಗರಾಜ್ ಆದೇಶಿಸಿದ್ದಾರೆ.

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment