ಶಿವಮೊಗ್ಗ ತಾಲೂಕು ಕೋಹಳ್ಳಿಯಲ್ಲಿ ಮೂರು ದಿನ ನಿಷೇಧಾಜ್ಞೆ, ಏನಿರುತ್ತೆ? ಏನಿರಲ್ಲ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021

ಶಿವಮೊಗ್ಗ ತಾಲೂಕಿನ ಕೋಹಳ್ಳಿಯಲ್ಲಿ ಸಿಆರ್‍ಪಿಸಿ ಸೆಕ್ಷನ್ 144ರ ಅನ್ವಯ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.

ಮೇ 28ರ ಬೆಳಗ್ಗೆ 6 ಗಂಟೆಯಿಂದ ಮೇ 31ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಕರೋನ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ  ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಈಗಾಗಲೆ ಕೋಹಳ್ಳಿ ಪಂಚಾಯಿತಿ ಟಾಸ್ಕ್ ಫೋರ್ಸ್ ವತಿಯಿಂದ ಈ ವ್ಯಾಪ್ತಿಯಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು.

ನಿಷೇಧಾಜ್ಞೆ ಸಂದರ್ಭ ಮೂರು ಅಥವಾ ಅದಕ್ಕಿಂತಲೂ ಹೆಚ್ಚು ಜನರು ಗುಂಪುಗೂಡಲು ಅವಕಾಶವಿಲ್ಲ. ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ.

ಇದನ್ನೂ  ಓದಿ | ಇಡೀ ದಿನ ಆಯನೂರು ಸಂಪೂರ್ಣ ಬಂದ್ಗೆ ಟಾಸ್ಕ್ ಫೋರ್ಸ್ ನಿರ್ಣಯ

ಇನ್ನು, ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳು, ಮದುವೆ ಸೇರಿದಂತೆ ಯಾವುದೆ ಕಾರ್ಯಕ್ರಮ ನಡೆಸಲು ಅಧಿಕಾರಿಗಳ ಅನುಮತಿ ಕಡ್ಡಾಯ.

ಮೆಡಿಕಲ್ ಶಾಪ್, ಆಸ್ಪತ್ರೆ ಮತ್ತು ಅಧಿಕೃತ ಹಾಲು ಕೇಂದ್ರ ಹೊರತು ಉಳಿದ್ಯಾವ ಮಳಿಗೆಗಳನ್ನು ತೆಗೆಯಲು ಅವಕಾಶವಿಲ್ಲ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment