ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021
ಶಿವಮೊಗ್ಗ ತಾಲೂಕು ಆಲದಹಳ್ಳಿಯ ಮದುವೆ ಸಮಾರಂಭದಲ್ಲಿ ಊಟ ಮಾಡಿ ಅಸ್ವಸ್ಥರಾದವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಸಮಾರಂಭದಲ್ಲಿ ಊಟ ಮಾಡಿದ ಮತ್ತಷ್ಟು ಮಂದಿಯ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭವಾಗಿದೆ.
ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ?
ಮದುವೆ ಸಮಾರಂಭದಲ್ಲಿ ರಾತ್ರಿ ಊಟ ಮಾಡಿದ್ದ ಸುಮಾರು 50 ಜನರಲ್ಲಿ ಇವತ್ತು ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೊಳಲೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. 26 ಮಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಮುಂದುವರೆದಿದೆ. ಎಲ್ಲರ ಆರೋಗ್ಯದಲ್ಲೂ ಚೇತರಿಕೆ ಕಂಡಿದೆ.
ಇದನ್ನೂ ಓದಿ | ಮದುವೆ ಮನೆಯಲ್ಲಿ ಊಟ ಮಾಡಿದ ಹಲವರಲ್ಲಿ ವಾಂತಿ, ಭೇದಿ
ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಉತ್ತಮ ರೀತಿಯ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದರು.
ಮದುವೆ ಸಮಾರಂಭದಲ್ಲಿ ಸುಮಾರು 500 ಮಂದಿ ಊಟ ಮಾಡಿರುವ ಅಂದಾಜಿದೆ. ಮತ್ತಷ್ಟು ಮಂದಿಯ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭವಾಗಿದೆ. ಅಗತ್ಯ ಇದ್ದವರಿಗೆ ತುರ್ತಾಗಿ ಚಿಕಿತ್ಸೆ ಒದಗಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
ಸಮುದಾಯ ಆರೋಗ್ಯ ಕೇಂದ್ರದ ಬಳಿ ಹೆಚ್ಚುವರಿ ಆಂಬುಲೆನ್ಸ್ ನಿಯೋಜಿಸಲಾಗಿದೆ. ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲು ವ್ಯವಸ್ಥೆ ಮಾಡಲಾಗಿದೆ.
ಮದುವೆ ಸಮಾರಂಭದಲ್ಲಿ ಬಳಕೆಯಾದ ಆಹಾರ ಮತ್ತು ಜನರಿಗೆ ಒದಗಿಸಲಾಗಿದ್ದ ನೀರಿನ ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಾಗಿದೆ. ವರದಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422