| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 24 APRIL 2024
SHIMOGA : ಜಮೀನಿನ ಖಾತೆ ಮಾಡಿಕೊಡಲು 15 ಸಾವಿರ ರೂ. ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಣವನ್ನು ವಶಕ್ಕೆ ಪಡೆದು ಯೋಗೇಶ್‌ನನ್ನು ಬಂಧಿಸಲಾಗಿದೆ.
ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ?
ನವುಲೆಯ ಯಶವಂತ ಎಂಬುವವರು ಚನ್ನಮುಂಭಾಪುರದಲ್ಲಿರುವ ಜಮೀನಿಗೆ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ 15 ಸಾವಿರ ರೂ. ಲಂಚದ ಹಣಕ್ಕೆ ಯೋಗೇಶ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಇವತ್ತು ಯಶವಂತ್ ಅವರಿಂದ ಹಣ ಪಡೆಯುತ್ತಿದ್ದಾಗ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೋಕಾಯುಕ್ತ ಎಸ್‌ಪಿ ಮಂಜುನಾಥ್, ಡಿವೈಎಸ್‌ಪಿ ಉಮೇಶ್ ಈಶ್ವರನಾಯ್ಕ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್. ಕುಸಲಾಪುರ, ಪ್ರಕಾಶ್, ಹೆಚ್.ಎಸ್.ಸುರೇಶ್, ಸಿಬ್ಬಂದಿ ಯೋಗೇಶ್, ಸುರೇಂದ್ರ ಹೆಚ್.ಜಿ, ಪ್ರಶಾಂತ್ ಕುಮಾರ್, ರಘುನಾಯ್ಕ, ದೇವರಾಜ್, ಪುಟ್ಟಮ್ಮ ಎನ್., ಪ್ರದೀಪ್, ಗೋಪಿ ವಿ., ಜಯಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಬ್ಯಾಂಕ್‌ಗೆ ನುಗ್ಗಿದ ಕಳ್ಳರು, ಸ್ಟ್ರಾಂಗ್ ರೂಂ ಲಾಕ್ ತೆಗೆಯಲು ಯತ್ನ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()