ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಅವಘಡ, ಕಾರ್ಮಿಕ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | ACCIDENT | 30 ಮೇ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವಿಮಾನ ನಿಲ್ದಾಣ ಕಾಮಗಾರಿ ವೇಳೆ ರೋಲರ್ ಚಾಲಕನ ನಿರ್ಲಕ್ಷ್ಯದಿಂದ ಕಾರ್ಮಿಕನೊಬ್ಬ ಮೃತಪಟ್ಟದ್ದಾನೆ. ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ವೇಳೆ ಘಟನೆ ಸಂಭವಿಸಿದೆ.

ಮಲ್ಲಿಕಾರ್ಜುನ ಹರಿಜನ (20) ಮೃತ ದುರ್ದೈವಿ. ಕಾಮಗಾರಿ ಸಂದರ್ಭ ರೋಲರ್ ಹರಿದು ಮಲ್ಲಿಕಾರ್ಜು ಮೃತಪಟ್ಟಿದ್ದಾನೆ. ಮಣ್ಣು ಸಮತಟ್ಟು ಮಾಡುವ ಕಂಪ್ರೆಸರ್ ಯಂತ್ರವು ಮಲ್ಲಿಕಾರ್ಜುನನ ಮೇಲೆ ಹರಿದಿದೆ. ಚಾಲಕನ ನಿರ್ಲಕ್ಷ್ಯವೆ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಿಂದ 11 ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಮನವಿ, ಪಟ್ಟಿಯಲ್ಲಿ ಯಾವೆಲ್ಲ ಮಾರ್ಗಗಳಿವೆ?

ಗದಗ ಜಿಲ್ಲೆಯ ಗೋಜನೂರಿನ ಮಲ್ಲಿಕಾರ್ಜುನ ತನ್ನ ತಂದೆಯೊಂದಿಗೆ ವಿಮಾನ ನಿಲ್ದಾಣ ಕಾಮಗಾರಿ ಕೆಲಸಕ್ಕೆ ಬಂದಿದ್ದ. ಇತ್ತೀಚೆಗಷ್ಟೆ ಈತ ಇಲ್ಲಿಗೆ ಆಗಮಿಸಿದ್ದ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಇದನ್ನೂ ಓದಿ – ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ, MRS ಸರ್ಕಲ್’ನಿಂದ ರಸ್ತೆ ಅಗಲೀಕರಣ, ಅಲಂಕಾರಿಕ ದೀಪ

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರು ಇಡುವಂತೆ ಒತ್ತಾಯವಿದೆ? ಇಲ್ಲಿದೆ ಲಿಸ್ಟ್

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment