ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಖಾಸಗಿ ಬಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 29 ಜೂನ್ 2022

ರಸ್ತೆ ಬದಿ ನಿಲ್ಲಿಸಿದ್ದ ಆಟೋಗೆ ಖಾಸಗಿ ಬಸ್ ಡಿಕ್ಕಿ (ACCIDENT) ಹೊಡೆದಿದೆ. ಆಟೋದಲ್ಲಿದ್ದವರು ಅದೃಷ್ಟವಶಾತ್ ಪ್ರಣಪಾಯದಿಂದ ಪಾರಾಗಿದ್ದಾರೆ.

Shimoga Nanjappa Hospital

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ ಹೊನ್ನಾಪುರ ಗ್ರಾಮದ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾವ್ಯಾ (25), ಸಾವಿತ್ರಮ್ಮ (65), ರಾಜು (35) ಎಂಬುವವರು ಗಾಯಗೊಂಡಿದ್ದಾರೆ.

ಹೇಗಾಯ್ತು ಘಟನೆ?

ಹಸುಗಳಿಗೆ ಮೇವು ತರಲು ಸಾವಿತ್ರಮ್ಮ ಅವರು ಲಗೇಜ್ ಆಟೋದಲ್ಲಿ ಮಗ ಮತ್ತು ಸೊಸೆಯ ಜೊತೆ ತೆರಳಿದ್ದರು. ಹಳೆ ಹೊನ್ನಾಪುರ ಪಶು ಆಸ್ಪತ್ರೆ ಬಳಿ ರಸ್ತೆಯ ಎಡ ಭಾಗದಲ್ಲಿ ಆಟೋ ನಿಲ್ಲಿಸಿ, ಕೆಳಗಿಳಿಯಲು ಮುಂದಾಗಿದ್ದರು. ಈ ವೇಳೆ ಹಿಂಬದಿಯಿಂದ ಖಾಸಗಿ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಸಾವಿತ್ರಮ್ಮ ಅವರ ತಲೆ, ಕೈ, ಕಾಲಿಗೆ ಗಾಯವಾಗಿದೆ. ಕಿವಿಯ ಮೇಲ್ಭಾಗದಲ್ಲಿ ಹೊಲಿಗೆ ಹಾಕಲಾಗಿದೆ. ಮಗ ರಾಜುಗೆ ಬಲಗಣ್ಣಿನ ಮೇಲ್ಭಾಗ ಮತ್ತು ಮೈ, ಕೈಗೆ ಗಾಯವಾಗಿದೆ. ಸೊಸೆ ಕಾವ್ಯಾ ಮತ್ತು ಮೊಮ್ಮಗನಿಗು ಸಣ್ಣಪುಟ್ಟ ಗಾಯವಾಗಿದೆ. (ACCIDENT)

ಕೂಡಲೆ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಹೈಟೆಕ್ ಗೇಟಿಗೆ ಅಡ್ಡಿ ಅಂತಾ ನೆರಳು ನೀಡುತ್ತಿದ್ದ ಮರಗಳನ್ನೇ ಕತ್ತರಿಸಿ ಬಿಸಾಕಿದರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment