ರಾತ್ರೋರಾತ್ರಿ ಅಡಕೆ ನಾಪತ್ತೆ, CCTV ನುಡಿಯಿತು ಸಾಕ್ಷಿ, ನಡುರಾತ್ರಿ ಸಾಹೇಬರ ಮನೆಗೆ ತಲುಪಿತಂತೆ ಕದ್ದ ಮಾಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಮನೆ ಹಿಂದೆ ಒಣಗಿಸಲು ಹಾಕಿದ್ದ ಸಿಪ್ಪೆಗೋಟು ಅಡಕೆಯನ್ನು (ADIKE THEFT) ನಡುರಾತ್ರಿ ಕಳ್ಳತನ ಮಾಡಲಾಗಿದೆ. ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು, ಅವರ ವಿರುದ್ಧ ದೂರು ನೀಡಲಾಗಿದೆ.

10 LAKH VIEWS IMAGE

ಬುಳ್ಳಾಪುರದ (BULLAPURA) ಮಂಜಪ್ಪ ಗೌಡ ಎಂಬುವವರಿಗೆ ಸೇರಿದ ಅಡಕೆ ಕಳ್ಳತನವಾಗಿದೆ. ಮನೆ ಹಿಂಭಾಗ ಸಿಪ್ಪೆಗೋಟು ಅಡಕೆಯನ್ನು ಒಣ ಹಾಕಲಾಗಿತ್ತು. ಬೆಳಗ್ಗೆ ಬಂದು ನೋಡಿದಾಗ ಅಡಕೆ ಇರಲಿಲ್ಲ.

ಸಿಸಿಟಿವಿ ನುಡಿದ ಸಾಕ್ಷಿ

TODAY-LINK-NEWS-IMAGE.jpgಮಂಜಪ್ಪ ಗೌಡ ಅವರು ತಮ್ಮ ಮನೆಯಲ್ಲಿ ಅಳವಡಿಸಿರುವ ಸಿಸಿಟಿವಿಯನ್ನು ಪರಿಶೀಲಿಸಿದ್ದಾರೆ. ಆಗಸ್ಟ್ 28ರ ರಾತ್ರಿ 11.50ರ ಹೊತ್ತಿಗೆ ಬೈಕಿನಲ್ಲಿ ಬಂದ ಇಬ್ಬರು ಅಡಕೆ ಕಳವು ಮಾಡಿರುವುದು ಗೊತ್ತಾಗಿದೆ. ಎರಡು ಚೀಲ ಅಡಕೆಯನ್ನು (ADIKE THEFT) ಇಬ್ಬರು ಕದ್ದುಕೊಂಡು ಹೋಗಿದ್ದರು.

ಊರಿನ ಇಬ್ಬರ ಮೇಲೆ ಅನುಮಾನ

ಸಿಸಿಟಿವಿ ದೃಶ್ಯವನ್ನು ಬುಳ್ಳಾಪುರದ ಗ್ರಾಮಸ್ಥರು ಪರಿಶೀಲನೆ ನಡೆಸಿದಾಗ ಶ್ರೀನಿವಾಸ್ ಮತ್ತು ಸುರೇಶ್ ಎಂಬುವವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಅವರನ್ನು ವಿಚಾರಿಸಿದಾಗ ಅಡಕೆ ಕದ್ದಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ ಅಡಕೆಯನ್ನು ಹೊಳಲೂರು ರಸ್ತೆಯಲ್ಲಿರುವ ಸಾಹೇಬರ ಮನೆಗೆ ಕೊಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಡಕೆ ಕಳ್ಳತನ ಪ್ರಕರಣ ಸಂಬಂಧ ಮಂಜಪ್ಪ ಗೌಡ ಅವರು ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಇದನ್ನೂ ಓದಿ – ಅಂಗಡಿ ಮುಂದೆ ಮಲಗಿದ್ದವನಿಗೆ ರಾಡ್’ನಿಂದ ಹೊಡೆದು, ಎದೆ ಮೇಲೆ ಕಲ್ಲು ಎತ್ತಿ ಹಾಕಿದ ಮಾಲೀಕನ ಮಗ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 4, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment